ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ದಾಂಡೇಲಿ(Dandeli) : ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರ ಪೊಲೀಸ್ ಠಾಣೆಯ ಕಾನಸ್ಟೇಬಲ್ ಮಹಾಂತೇಶ ಅವರನ್ನು ಅಮಾನತ್ತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ದೀಪನ್ ಆದೇಶಿಸಿದ್ದಾರೆ.
ಯುವತಿಗೆ ಅಸಭ್ಯ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತು ದಾಂಡೇಲಿಯ ಪರ್ಲ್ ಫರ್ನಾಂಡೀಸ್ ಎಂಬುವವರು ಜುಲೈ 8ರಂದು ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಇಮ್ರಾನ್ ಮತ್ತು ಮಹಾಂತೇಶ ಎಂಬ ಇಬ್ಬರು ಪೊಲೀಸರ ವಿರುದ್ಧ ದೂರು ದಾಖಲಾಗಿತ್ತು.
ಇದರ ನಡುವೆ, ಮತ್ತೋರ್ವ ಆರೋಪಿ ಇರ್ಪಾನ್ ಅವರ ಮೊಬೈಲ್ ಸಂಭಾಷಣೆಯ ಧ್ವನಿ (ವಾಯ್ಸ್) ಪರೀಕ್ಷೆ ನಡೆಸುವ ಸಾಧ್ಯತೆಯಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
