ಇ ಸಮಾಚಾರ ಡಿಜಿಟಲ್  ನ್ಯೂಸ್ (esamachara  digital news) : ಮುಂಡಗೋಡು(Mundgodu): ಉತ್ತರಕನ್ನಡ(Uttarkannada) ಜಿಲ್ಲೆಯ ಮುಂಡಗೋಡು ತಾಲೂಕಿನ ಕಾವಲಕೊಪ್ಪ ಗ್ರಾಮದ ಶರೀಫಜ್ಜನ ದೇವಸ್ಥಾನದ ಸಮೀಪ ಬಸ್ ಹಾಗೂ ಲಾರಿ(Bus and Lorry) ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ(Hubli Kim’s Hospital) ರವಾನಿಸಲಾಗಿದೆ. ಉಳಿದ ಗಾಯಾಳುಗಳನ್ನು ಮುಂಡಗೋಡು ಸರ್ಕಾರಿ ಆಸ್ಪತ್ರೆಗೆ(Mundagodu Government Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾನಗಲ್‌ನಿಂದ ಮುಂಡಗೋಡು(Hanagal to Mundgosu) ಕಡೆಗೆ ಬರುತ್ತಿದ್ದ ಬಸ್ ಹಾಗೂ ಮುಂಡಗೋಡಿನಿಂದ ಶಿರಸಿ(Mundgodu to Sirsi) ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮುಂಡಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಮುಂಡಗೋಡು ಪೊಲೀಸ್ ಠಾಣೆಯಲ್ಲಿ(Mundgod Police Station) ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.