ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಮುಂಡಗೋಡು(Mundgodu) : ಸಾಲಬಾಧೆ ಹಾಗೂ ಬೆಳೆ ಹಾನಿಯಿಂದ(Crop Loss) ಮನನೊಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಹುನಗುಂದ ಗ್ರಾಮದಲ್ಲಿ(Mundagodu Taluku Hunagunda Village) ನಡೆದಿದೆ.

ಮೃತ ರೈತನನ್ನು ಫಕ್ಕೀರಗೌಡ ಬಸನಗೌಡ ಪಾಟೀಲ್ (42) ಎಂದು ಗುರುತಿಸಲಾಗಿದೆ. ಎರಡು ಎಕರೆ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದ ಅವರು, ಕೃಷಿ ಚಟುವಟಿಕೆಗಳಿಗಾಗಿ (Agriculture Activities) ಸ್ಥಳೀಯ ಸಹಕಾರಿ ಸಂಘ, ಗ್ರಾಮೀಣ ಬ್ಯಾಂಕ್ ಹಾಗೂ ವಿವಿಧ ಖಾಸಗಿ ಹಣಕಾಸು ಸಂಸ್ಥೆಗಳಿಂದ ಸುಮಾರು ₹12 ಲಕ್ಷಕ್ಕೂ ಅಧಿಕ ಸಾಲ(Loan) ಪಡೆದಿದ್ದರು ಎಂದು ತಿಳಿದುಬಂದಿದೆ.

ಪ್ರಸಕ್ತ ವರ್ಷದಲ್ಲಿ ಮಳೆ ಕೈಕೊಟ್ಟು ಬರದ ಛಾಯೆ ಆವರಿಸಿದ್ದರಿಂದ ಬೆಳೆ ಬೆಳೆಯುವಲ್ಲಿ ತೊಂದರೆ ಉಂಟಾಗಿ, ಸಾಲ ಮರುಪಾವತಿ ಮಾಡುವ ಬಗ್ಗೆ ತೀವ್ರ ಆತಂಕದಲ್ಲಿದ್ದರು ಎನ್ನಲಾಗಿದೆ. ಇದೇ ಕಾರಣದಿಂದ ಮನನೊಂದು ತಮ್ಮ ಗದ್ದೆಯಲ್ಲೇ ರಾತ್ರಿ ವೇಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮುಂಡಗೋಡು ಪೊಲೀಸ್ ಠಾಣೆಯಲ್ಲಿ(Mundagodu Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.