ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Banglore) : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ(Former PM H D Devegowda Wife Chennamma) ಅವರು ಶನಿವಾರ(ಜುಲೈ 18ರಂದು) ನಿಧನರಾಗಿದ್ದಾರೆ.

ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ(Bangalore Manipal Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಎರಡು ದಿನಗಳಿಂದ ಐಸಿಯುನಲ್ಲಿ ಚೆನ್ನಮ್ಮಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಇಂದು ಮಧ್ಯಾಹ್ನ ನಾಲ್ಕು ಗಂಟೆಯ ಸುಮಾರಿಗೆ ಚೆನ್ನಮ್ಮ ಅವರಿಗೆ ಕಾರ್ಡಿಯಕ್ ಅರೆಸ್ಟ್ ಅಗಿತ್ತು ಎಂದು ಮಣಿಪಾಲ್​ ಆಸ್ಪತ್ರೆ ಮಾಹಿತಿ ನೀಡಿದ್ದು,  ಚೆನ್ನಮ್ಮ ಅವರ ನಿಧನದಿಂದಾಗಿ ದೇವೇಗೌಡರ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಅವರ ನಿಧನಕ್ಕೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.