ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ‘ಬಾರ್ಡರ್ ಖುಲ್ಲಾ ಹೈ… ಚೌಕಿದಾರ್ ಕಹಾಂ ಹೈ?… ಕ್ಯಾ ಕರ್ ರಹೇ ಹೋ?’ ಎಂಬ ಪ್ರಶ್ನೆಯ ಮೂಲಕ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ(Home Minister Amit Sha) ಅವರನ್ನು ಎಐಸಿಸಿ ಕಾರ್ಯದರ್ಶಿ ಅಂಜಲಿ ನಿಂಬಾಳ್ಕರ್(AICC Secretary Anjali Nimbalkar) ಟೀಕಿಸಿದ್ದಾರೆ.
ನಗರದಲ್ಲಿ ಪತ್ರಿಕಾ ಭವನದಲ್ಲಿ ನಡೆದ ಎಸ್‌ಐಆರ್(SIR) ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಡಿ ಭದ್ರತೆ, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮಹಿಳಾ ಮೀಸಲಾತಿ ವಿಚಾರಗಳಲ್ಲಿ ಕೇಂದ್ರ ಸರ್ಕಾರದ(Central Government) ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದರು.
ಅಕ್ರಮ ವಲಸಿಗರ ಬಗ್ಗೆ ಬಿಜೆಪಿ ನಾಯಕರು(BJP Leaders) ಪ್ರತಿದಿನ ಆರೋಪ ಮಾಡುತ್ತಿದ್ದಾರೆ. ಆದರೆ ದೇಶದ ಗಡಿಯನ್ನು ಸುರಕ್ಷಿತವಾಗಿಡುವ ಹೊಣೆ ರಾಜ್ಯ ಸರ್ಕಾರದ್ದಲ್ಲ, ಕೇಂದ್ರ ಸರ್ಕಾರದ್ದಾಗಿದೆ. ಹಾಗಿದ್ದರೆ ಗಡಿ ತೆರೆದಿಟ್ಟಿರುವವರು ಯಾರು ಎಂದು ಪ್ರಶ್ನಿಸಿದರು. ‘ಅಮಿತ್ ಷಾ ಜೀ… ಕಹಾಂ ಹೋ? ಬಾರ್ಡರ್ ಖುಲ್ಲಾ ಹೈ… ಚೌಕಿದಾರ್ ಕ್ಯಾ ಕರ್ ರಹೇ ಹೋ?’ ಎಂದು ಹಿಂದಿಯಲ್ಲಿ ವ್ಯಂಗ್ಯವಾಡಿದರು.
ಚುನಾವಣಾ ಆಯೋಗ(Election Commission), ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಸಿಬಿಐ(CBI) ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ(Central Government) ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಕೋಟ್ಯಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿಸುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ಬಿಹಾರ(Bihar) ಮತ್ತು ಪಶ್ಚಿಮ ಬಂಗಾಳದಲ್ಲಿ(West Bengal) ಲಕ್ಷಾಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಮೂಲಕ ಚುನಾವಣಾ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರುವ ಯತ್ನ ನಡೆದಿದೆ ಎಂದು ಆರೋಪಿಸಿದರು.
ಮಹಿಳಾ ಮೀಸಲಾತಿ ವಿಧೇಯಕದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮಹಿಳಾ ಮೀಸಲಾತಿಗೆ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದರು. ಯುಪಿಎ ಸರ್ಕಾರದ(UPA Government) ಅವಧಿಯಲ್ಲೇ ರಾಜ್ಯಸಭೆಯಲ್ಲಿ ಶೇ.33 ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿತ್ತು ಎಂದು ನೆನಪಿಸಿದರು.
ಆದರೆ ಮಹಿಳಾ ಮೀಸಲಾತಿ ನೆಪದಲ್ಲಿ ಕ್ಷೇತ್ರ ಮರುವಿಂಗಡಣೆ (ಡಿಲಿಮಿಟೇಷನ್) ಪ್ರಕ್ರಿಯೆ ಕೈಗೊಳ್ಳುವುದಕ್ಕೆ ಕಾಂಗ್ರೆಸ್(Congress) ವಿರೋಧವಿದೆ ಎಂದು ತಿಳಿಸಿದರು. ಕ್ಷೇತ್ರ ಮರುವಿಂಗಡಣೆ ಕೈಬಿಟ್ಟು ಕೇವಲ ಮಹಿಳಾ ಮೀಸಲಾತಿ ವಿಧೇಯಕವನ್ನು ಜಾರಿಗೆ ತಂದರೆ, ರಾಹುಲ್ ಗಾಂಧಿ(Rahul Gandhi) ಹಾಗೂ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ನೇತೃತ್ವದ ‘ಇಂಡಿಯಾ’ ಮೈತ್ರಿಕೂಟ ಬೇಷರತ್ತಾಗಿ ಬೆಂಬಲ ನೀಡಲಿದೆ ಎಂದು ಅಂಜಲಿ ನಿಂಬಾಳ್ಕರ್ ಹೇಳಿದರು.
