ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) : ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳತನ ಪ್ರಕರಣವನ್ನು ಭಟ್ಕಳ(Bhatkal) ಗ್ರಾಮೀಣ ಪೊಲೀಸರು ಭೇದಿಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಕೆಯ ಜನತಾ ಕಾಲೋನಿ(Belle Janata Colony) ನಿವಾಸಿ ಲೋಹಿತ್ ಸುಬ್ಬಯ್ಯ ಮೊಗೇರ (26) ಎಂಬುವವರು ದೂರು ನೀಡಿ, ಹೆಬಳೆ(Heble) ಗ್ರಾಮದ ನೆರ್ಲೆಸರ್‌ನಲ್ಲಿರುವ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಪರ್ಲ್ ಮೆಟಾಲಿಕ್ ಬಣ್ಣದ ಬಜಾಜ್ ಪಲ್ಸರ್ ಎನ್‌ಎಸ್ 200 (ಕೆಎ-47 ಎಕ್ಸ್-0623) ಬೈಕ್‌ನ್ನು ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದಿದ್ದರು. ಸುಮಾರು ₹70 ಸಾವಿರ ಮೌಲ್ಯದ ಬೈಕ್ ಕಳುವಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭಟ್ಕಳ(Bhatkal) ಗ್ರಾಮೀಣ ಪೊಲೀಸರು ತನಿಖೆ ನಡೆಸಿದ್ದರು.

ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ಹೆಬಳೆ 4ನೇ ಕ್ರಾಸ್, ಫಿರ್ದೋಸ್ ನಗರ ನಿವಾಸಿ ಸೈಯದ್ ಅಲಿ (22) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ ಕಳುವಾಗಿದ್ದ ಬಜಾಜ್ ಪಲ್ಸರ್ ಎನ್‌ಎಸ್ 200 ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಹಾಗೂ ಡಿವೈಎಸ್ಪಿ ಗಿರೀಶ ಬಿ. ಅವರ ಮಾರ್ಗದರ್ಶನದಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ವೆಂಕಟೇಶ ಮುರನಾಳ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ತನಿಖಾಧಿಕಾರಿ ಪಿಎಸೈ ಭರಮಪ್ಪ ಬೆಳಗಲಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಮಂಜುನಾಥ ಗೊಂಡ, ಈರಣ್ಣ ಪೂಜೇರಿ, ಬಾಗಪ್ಪ ಕಡಕಲ್ ಮತ್ತು ನಿಂಗನಗೌಡ ಪಾಟೀಲ ಅವರ ತಂಡ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.