ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಉಡುಪಿ /ಮಂಗಳೂರು(Udupi/Manglore) : ಕರಾವಳಿ(Coastal) ಭಾಗದಲ್ಲಿ ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಉಡುಪಿ(Udupi) ಹಾಗೂ ದಕ್ಷಿಣ ಕನ್ನಡ(SouthCanara) ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಶಾಲೆ-ಕಾಲೇಜುಗಳಿಗೆ ರಜೆ(School-College Holiday) ಘೋಷಿಸಿದೆ.

ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಡಿಪ್ಲೋಮೋ ವಿದ್ಯಾರ್ಥಿಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.(DC T K Swaroop) ಆದೇಶ ಹೊರಡಿಸಿದ್ದಾರೆ.

ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್(Orange Alert) ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ(DC Darshan H V). ಆದೇಶದಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ ಹಾಗೂ ಬಲವಾದ ಗಾಳಿಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಗತ್ಯವಾಗಿ ಹೊರಗಡೆ ಸಂಚರಿಸದೇ, ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.