ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ದಾಂಡೇಲಿ(Dandeli) : ರಾಜ್ಯ ಹೆದ್ದಾರಿ(State Highway) ಹಳಿಯಾಳ – ದಾಂಡೇಲಿಯ (Dandeli-Haliyal) ತಾಟಗೇರಾ ಕ್ರಾಸ್ ಹತ್ತಿರ ಬೈಕ್ ಸವಾರನೋರ್ವ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಪ್ರಸಾದ ರಾಘವೇಂದ್ರ ಹುಲ್ಕುಂದ(22)ಮೃತ ದುರ್ದೈವಿ. ಬೆಳಗಾವಿ(Belagavi) ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಿವಾಸಿ ಎಂದು ಗುರುತಿಸಲಾಗಿದೆ. ಪ್ರಸಾದ್ ಬೈಲಹೊಂಗಲದಿಂದ ಶ್ರೀ ಕ್ಷೇತ್ರ ಉಳವಿ(Bailahongal to Ulavi) ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಅಪಘಾತದಿಂದ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಅವರು ಸ್ಥಳದಲ್ಲೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

ಸ್ಥಳಕ್ಕೆ ದಾಂಡೇಲಿ(Dandeli) ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆಯನ್ನು ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.