ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯನ್ನು(Police System) ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ(Uttarkannada District Police Department) ಮುಂದಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್(SP Deepan M N) ಅವರು ಜಿಲ್ಲೆಯ ನಾಲ್ಕೂ ಉಪವಿಭಾಗಗಳ ಪೊಲೀಸ್‌ ಅಧಿಕಾರಿಗಳ ಹೆಸರು, ಭಾವಚಿತ್ರ, ಮೊಬೈಲ್ ಸಂಖ್ಯೆ ಹಾಗೂ ಪೊಲೀಸ್ ಠಾಣೆಗಳ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ.

ಜಿಲ್ಲೆಯ ಸಾರ್ವಜನಿಕರು ತುರ್ತು(Emergency) ಸಂದರ್ಭದಲ್ಲಿ ಅಥವಾ ಅಗತ್ಯ ಮಾಹಿತಿ ಪಡೆಯಲು ಸುಲಭವಾಗಿ ಸಂಬಂಧಪಟ್ಟ ಠಾಣೆಯ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಲು ಅನುಕೂಲವಾಗುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ಇಲಾಖೆಯ ಅಧಿಕೃತ ಸಾಮಾಜಿಕ ಜಾಲತಾಣಗಳ(Social Media) ಮೂಲಕ ಹಂಚಿಕೊಳ್ಳಲಾಗಿದೆ. ಅಧಿಕಾರಿಗಳ ಭಾವಚಿತ್ರದೊಂದಿಗೆ ಅವರ ಹುದ್ದೆ ಮತ್ತು ಸಂಪರ್ಕ ಸಂಖ್ಯೆಯನ್ನು ಪ್ರಕಟಿಸಿರುವುದು ಸಾರ್ವಜನಿಕರಿಗೆ ಇನ್ನಷ್ಟು ಆತ್ಮವಿಶ್ವಾಸ ಮೂಡಿಸುವ ಪ್ರಯತ್ನವಾಗಿದೆ

ತುರ್ತು ಪರಿಸ್ಥಿತಿಯಲ್ಲಿ 112 ಸಹಾಯವಾಣಿ(Helpline) ಲಭ್ಯವಿದ್ದು, ಪೊಲೀಸ್‌ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಸಂಪರ್ಕ ವಿವರಗಳನ್ನು ಪಡೆಯಬಹುದು. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕವೇ ಈ ಮಾಹಿತಿಯನ್ನು ಜನರಿಗೆ ತಲುಪಿಸಿರುವುದು ಇಲಾಖೆಯ ಜನಸ್ನೇಹಿ ವ್ಯವಸ್ಥೆಗೆ ಬಲ ಬಂದಂತಾಗಿದೆ.

ಉತ್ತರಕನ್ನಡ(Uttarkannada) ಜಿಲ್ಲೆಯ ಪೊಲೀಸರು ಈಗಾಗಲೇ ಅಪರಾಧ ಪ್ರಕರಣಗಳಲ್ಲಿ ತ್ವರಿತ ಸ್ಪಂದನೆ, ಆರೋಪಿಗಳ ಶೀಘ್ರ ಬಂಧನ, ರಸ್ತೆ ಸುರಕ್ಷತೆ, ಮಾದಕ ವ್ಯಸನ ವಿರೋಧಿ ಜಾಗೃತಿ ಹಾಗೂ ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಗಳ ಮೂಲಕ ಉತ್ತರ ಕನ್ನಡ ಜಿಲ್ಲಾ ಪೊಲೀಸ್‌ ಇಲಾಖೆ ಒಳ್ಳೆಯ ಹೆಸರು ಗಳಿಸಿದೆ. ಇದೀಗ ಅಧಿಕಾರಿಗಳ ನೇರ ಸಂಪರ್ಕ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುವ ಮೂಲಕ ಜನತೆ ಮತ್ತು ಪೊಲೀಸರು ಹತ್ತಿರ ಇರುವಂತೆ ಮಾಡಲಾಗಿದೆ.