ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ದಾಂಡೇಲಿ(Dandeli) : ನಗರದ ಜೆ.ಎನ್.ರಸ್ತೆಯ ಮೆಡ್ ಪ್ಲಸ್ ಮೆಡಿಕಲ್ ಮುಂಭಾಗದಲ್ಲಿ ಮೂವರು ಯುವಕರು ತಂಡವೊಂದು ಯುವಕನೋರ್ವನ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದೆ.

ಮೂವರು ಯುವಕರು ಇದ್ದಕ್ಕಿದ್ದಂತೆ ಓರ್ವನ ಮೇಲೆ ಹಲ್ಲೆ ನಡೆಸಿ, ಆನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಹಲ್ಲೆಗೊಳಗಾದವನು ಸಹ ಪರಾರಿಯಾಗಿದ್ದಾನೆ. ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಶಿವಾನಂದ ಮದರಕಂಡಿ, ಸಿಪಿಐ ಶಿವಾನಂದ ಅಂಬಿಗೇರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಹಲ್ಲೆ ಮಾಡಿದವರು ಮತ್ತು ಹಲ್ಲೆಗೊಳಗಾದವನು ಕೂಡ ಸ್ಥಳದಿಂದ ಪರಾರಿಯಾಗಿರುವುದರಿಂದ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಘಟನೆ ಸಂಬಂಧ ದಾಂಡೇಲಿ(Dandeli) ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.