ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಉತ್ತರ ಕನ್ನಡ(Uttarkannada) ಜಿಲ್ಲೆಯ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ(Karwar Rabindranath Tagore Beach) ವ್ಯಕ್ತಿಯೊಬ್ಬರು ಸಮುದ್ರದಲ್ಲಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ವಾರ್ಶಿಪ್ ಮ್ಯೂಸಿಯಂ(Warship Museum) ಹಿಂಭಾಗದಲ್ಲಿ ವ್ಯಕ್ತಿಯೊಬ್ಬರು ತಮ್ಮ ಬ್ಯಾಗ್ ಅನ್ನು ತೀರದಲ್ಲಿಟ್ಟು ಸಮುದ್ರಕ್ಕೆ ಇಳಿದಿದ್ದು, ಕೆಲವೇ ಕ್ಷಣಗಳಲ್ಲಿ ಅಲೆಗಳ ನಡುವೆ ಕಣ್ಮರೆಯಾಗಿದ್ದಾರೆ. ಸ್ಥಳೀಯರು ಮಾಹಿತಿ ನೀಡಿದ ಬಳಿಕ ಲೈಫ್ಗಾರ್ಡ್(Lifeguard) ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ, ಅಷ್ಟರಲ್ಲೇ ವ್ಯಕ್ತಿ ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಕರಾವಳಿ ಕಾವಲು ಪಡೆ(Coastal Security Police) ಹಾಗೂ ಕಾರವಾರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತೀರದಲ್ಲಿ ದೊರೆತ ಬ್ಯಾಗ್ನಲ್ಲಿ ಬೆಡ್ಶೀಟ್, ಬಟ್ಟೆಗಳು ಹಾಗೂ ಧರಿಸುವ ಟೋಪಿ ಪತ್ತೆಯಾಗಿದ್ದು, ಅದರ ಆಧಾರದ ಮೇಲೆ ನಾಪತ್ತೆಯಾದ ವ್ಯಕ್ತಿ ಯಾರು ಏಲ್ಲಿಯವನು ಎಂಬುದು ಗೊತ್ತಾಗಿಲ್ಲ. ವ್ಯಕ್ತಿಯ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.
ಪ್ರಸ್ತುತ ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆಯಲ್ಲಿ ಶೋಧ ಕಾರ್ಯಕ್ಕೆ ಸವಾಲು ಎದುರಾಗಿದೆ. ನಾಪತ್ತೆಯಾದ ವ್ಯಕ್ತಿಯ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಪೊಲೀಸರು ಮುಂದುವರಿಸಿದ್ದಾರೆ. ಈ ಘಟನೆ ಕಾರವಾರ(Karwar) ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
