ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) : ತಾಲೂಕಿನ ಜಾಲಿಕೋಡಿ ಸಮುದ್ರದಲ್ಲಿ(Jalikodi Beach) ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಪಾತಿದೋಣಿ ಮಗುಚಿ(Boat Capseaz) ಮೀನುಗಾರರೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಮಂಜುನಾಥ ಬೇಟ್ಯಾ ಮೊಗೇರ (56) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ ಜಾಲಿಕೋಡಿಯಿಂದ ಸಮುದ್ರದಕ್ಕೆ ಮೀನುಗಾರಿಕೆ(Fishing) ನಡೆಸುತ್ತಿದ್ದ ವೇಳೆ ಅಲೆಗಳ ರಭಸಕ್ಕೆ ಪಾತಿದೋಣಿ ಮಗುಚಿ ಬಿದ್ದಿದೆ. ಪರಿಣಾಮವಾಗಿ ಮಂಜುನಾಥ ಮೊಗೇರ ಅವರು ಸಮುದ್ರಕ್ಕೆ ಬಿದ್ದಿದ್ದರು. ಘಟನೆ ಬಳಿಕ ಅವರು ನಾಪತ್ತೆಯಾಗಿದ್ದು, ಸ್ಥಳೀಯ ಮೀನುಗಾರರು(Fishermen) ಹಾಗೂ ಕರಾವಳಿ ಕಾವಲು ಪಡೆ, ಪೊಲೀಸರು ಸಾಕಷ್ಟು ಶೋಧ ಕಾರ್ಯ ನಡೆಸಿದ್ದರು.

ಇಂದು ಬೆಳಿಗ್ಗೆ ಮುಂಡಳ್ಳಿ(Mundalli) ಸಮೀಪದ ತೀರದಲ್ಲಿ ಮಂಜುನಾಥ ಅವರ ಮೃತದೇಹ ಪತ್ತೆಯಾಗಿದೆ. ಮೃತ ಮೀನುಗಾರನದ್ದು ಕುಟುಂಬ ಕುಟುಂಬವಾಗಿದ್ದು ದುಡಿಯುವ ಕೈಗಳನ್ನ ಕಳೆದುಕೊಂಡು ಆತಂಕದಲ್ಲಿದ್ದಾರೆ. ಈ ಕುರಿತು ಭಟ್ಕಳ(Bhatkal) ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.