ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರ್ಕಳ(Karkala) : ಹಣದ ಬೇಡಿಕೆ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ(Social Media) ವೈರಲ್ ಕಾರ್ಕಳ(Karkal) ಡಿವೈಎಸ್ಪಿ, ಸರ್ಕಲ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಅಮಾನತುಗೊಳಿಸಲಾಗಿದೆ.
ಪೊಲೀಸ್ ಇಲಾಖೆ(Police Department) ಕಚೇರಿಯಲ್ಲಾದ ಆರೋಪ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿದ ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಪ್ರತಿಕ್ರಿಯಿಸಿದ್ದಾರೆ.
ವಿಡಿಯೋಗಳು ಹಾಗೂ ಆರೋಪಗಳ ಆಧಾರದ ಮೇಲೆ ಹೆಚ್ಚುವರಿ ಎಸ್ಪಿ ಅವರಿಂದ ಪ್ರಾಥಮಿಕ ತನಿಖೆ(Investigation) ನಡೆಸಲಾಗಿದೆ. ತನಿಖಾ ವರದಿಯ ಮೇರೆಗೆ ಕಾರ್ಕಳ(Karkal) ಡಿವೈಎಸ್ಪಿ ವಿಜಯ ಪ್ರಸಾದ್, ಸರ್ಕಲ್ ಇನ್ಸ್ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿ ಸಿಬ್ಬಂದಿ ಶಿವಾನಂದ ಅವರನ್ನು ಇಲಾಖಾ ಶಿಸ್ತು ಕ್ರಮ ಪೂರ್ಣಗೊಳ್ಳುವವರೆಗೆ ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
