ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಭಟ್ಕಳ(Bhatkal) : ಜಿಲ್ಲೆಯಲ್ಲಿ ಶಾಲಾ ವಾಹನಗಳ(School Van) ನಿಯಮಬಾಹಿರ ಸಂಚಾರ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ, ನಗರ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಶಾಲಾ ವಾಹನಗಳ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು.
ಸಂಚಾರಿ ನಿಯಮ(Traffic Rules) ಉಲ್ಲಂಘಿಸಿದ ಐದು ವಾಹನಗಳಿಗೆ ದಂಡ ವಿಧಿಸಲಾಗಿದೆ. ಭಟ್ಕಳ(Bhatkal) ನಗರ ಠಾಣೆಯ ಪಿಎಸ್ಐ ನವೀನ್ ನಾಯ್ಕ ಹಾಗೂ ಪಿಎಸ್ಐ ತಿಮ್ಮಪ್ಪ ಎಸ್. ಅವರ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಗರದ ವಿವಿಧ ಭಾಗಗಳಲ್ಲಿ ಸಂಚರಿಸುತ್ತಿದ್ದ ಶಾಲಾ ವಾಹನಗಳನ್ನು ತಡೆದು ಕೂಲಂಕುಷವಾಗಿ ಪರಿಶೀಲಿಸಿದರು.
ತಪಾಸಣೆಯ ವೇಳೆ ಕೆಲವು ವಾಹನಗಳಲ್ಲಿ ಇನ್ಸುರೆನ್ಸ್(Vehicle Insurance) ಸೇರಿದಂತೆ ಕಡ್ಡಾಯವಾಗಿ ಇರಬೇಕಾದ ಅಗತ್ಯ ದಾಖಲೆಗಳು ಸಮರ್ಪಕವಾಗಿ ಇಲ್ಲದಿರುವುದು ಗೊತ್ತಾಗಿದೆ.ಹೀಗಾಗಿ ನಿಯಮ ಉಲ್ಲಂಘಿಸಿದ ಒಟ್ಟು ಐದು ಶಾಲಾ ವಾಹನಗಳಿಗೆ ಸ್ಥಳದಲ್ಲೇ ದಂಡ ವಿಧಿಸಲಾಯಿತು.
ಶಾಲೆಗೆ ಹೋಗಿ ಬರುವ ವಿದ್ಯಾರ್ಥಿಗಳ ಸುರಕ್ಷತೆ(Saftey) ಮುಖ್ಯವಾಗಿದೆ. ಶಾಲಾ ವಾಹನಗಳ ಚಾಲಕರು ಹಾಗೂ ಆಡಳಿತ ಮಂಡಳಿಯವರು ವಾಹನಗಳಿಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳನ್ನು ಸರಿಯಾಗಿ ಹೊಂದಿರಬೇಕು ಮತ್ತು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಕ್ಕಳ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಇತರ ಕಡೆಗಳಲ್ಲೂ ನಿಯಮ ಉಲ್ಲಂಘಿಸುವ ವಾಹನಗಳಿದ್ದು ಅವುಗಳ ವಿರುದ್ಧ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬಂದಿದೆ.
