ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಉತ್ತರಕನ್ನಡ (Uttarkannada) ಜಿಲ್ಲೆಯಲ್ಲಿ ನಾಳೆ ಆರೆಂಜ್ ಅಲರ್ಟ್(Orange Alert) ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಾಂಡೇಲಿ(Dandeli) ಹಾಗೂ ಜೋಯಿಡಾ(Joida) ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ(School Holiday) ಘೋಷಿಸಲಾಗಿದೆ.
ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ಎಲ್ಲಾ ತರಗತಿಗಳಿಗೆ ನಾಳೆ ರಜೆ ಇರಲಿದೆ. ಜಿಲ್ಲೆಯಲ್ಲಿ ಭಾರಿ ಮಳೆಯ(Heavy Rain) ಸಾಧ್ಯತೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ರಜೆ ಘೋಷಿಸಿ ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ(DC Laxmipriya) ಅವರು ಆದೇಶ ಹೊರಡಿಸಿದ್ದಾರೆ.
