ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಉಡುಪಿ(Udupi) : ಕಾಂಗ್ರೆಸ್(Congress) ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಉತ್ತರ ಪ್ರದೇಶ(Uttarpradesha) ಮೂಲದ ರಾಜುನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಪರಾರಿಯಾಗಲು ಯತ್ನಿಸಿದ ವೇಳೆ ಆತನ ಬಲಗಾಲಿಗೆ ಗುಂಡು ಹಾರಿಸಿದ್ದರು. ಗಾಯಗೊಂಡಿರುವ ರಾಜು ಸದ್ಯ ಕೆಎಂಸಿ ಆಸ್ಪತ್ರೆಯಲ್ಲಿ(KMC Hospital) ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದೀಗ ಪರಾರಿಯಾಗಿದ್ದ ಮತ್ತಿಬ್ಬರು ಆರೋಪಿಗಳಾದ ಉತ್ತರಾಖಂಡ(Uttarakhanda) ಮೂಲದ ಅಜಯ್ ರಸ್ತೋಗಿ ಅಲಿಯಾಸ್ ಅನುಮೋಲ್ನನ್ನು ಕುಮಟಾದಲ್ಲಿ ಹಾಗೂ ಜಿಯಾ ವುಲ್ ವಜೂಲ್ ಶೇಖ್ ಅಲಿಯಾಸ್ ದೀಪಕ್ಎಂಬಾತನನ್ನು ಭಟ್ಕಳದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಮೂವರು ಆರೋಪಿಗಳು ಭಟ್ಕಳದತ್ತ(Bhatkal) ಪರಾರಿಯಾಗುತ್ತಿದ್ದರು ಎನ್ನಲಾಗಿದೆ. ಬಸ್ಸಿನಲ್ಲಿ ಭಟ್ಕಳ ಕಡೆಗೆ ತೆರಳುತ್ತಿದ್ದ ವೇಳೆ ಪೊಲೀಸರು ತಪಾಸಣೆ ನಡೆಸಿದ್ದು, ತಪಾಸಣೆ ವೇಳೆ ಬಸ್ಸಿನಿಂದ ಇಳಿದು ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಡೇವಿಡ್ ಡಿಸೋಜಾ ಅವರ ಕೊಲೆಗೆ ಹಣಕಾಸಿನ ವೈಷಮ್ಯವೇ ಪ್ರಮುಖ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಡೇವಿಡ್ ಡಿಸೋಜಾ ನಡೆಸುತ್ತಿದ್ದ ಕಾಮಗಾರಿಗೆ ಸಂಬಂಧಿಸಿದಂತೆ ಅನ್ಯರಾಜ್ಯದ ಕಂಪನಿಯೊಂದಿಗಿನ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಕೊಲೆಗೆ ಸುಫಾರಿ ನೀಡಿದವರು ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಆರೋಪಿಗಳಿಗೆ ಆಶ್ರಯ ನೀಡಿದವರ ಬಗ್ಗೆಯೂ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳ ಕೈವಾಡವಿದೆಯೇ ಹಾಗೂ ಕೊಲೆಗೆ ಸುಫಾರಿ ನೀಡಿದವರು ಯಾರು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ತನಿಖೆ(Police Investigation) ತೀವ್ರಗೊಳಿಸಿದ್ದಾರೆ.