ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ದಾಂಡೇಲಿ(Dandeli) : ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಸನ್ ಮಾಳ್ ಗ್ರಾಮದ ವೈಲ್ಡರ್ ನೆಸ್ಟ್ ರೆಸಾರ್ಟ್‌ ನಲ್ಲಿ ಬ್ಲ್ಯಾಕ್ ಪ್ಯಾಂಥರ್ ದಾಳಿ ನಡೆಸಿದ ಘಟನೆ ನಡೆದಿದೆ.

ಸೋಮವಾರ ಬೆಳಗಿನ ನಾಲ್ಕು ಗಂಟೆ ಸುಮಾರಿಗೆ ರೆಸಾರ್ಟ್ ಆವರಣದಲ್ಲಿ ಮಲಗಿದ್ದ ಜರ್ಮನ್ ಶೆಫರ್ಡ್ ನಾಯಿಯ ಮೇಲೆ ಬ್ಲ್ಯಾಕ್ ಪ್ಯಾಂಥರ್ ದಾಳಿ ನಡೆಸಿದೆ. ದಾಳಿಗೆ ಒಳಗಾದ ಶ್ವಾನ ಸ್ಥಳದಲ್ಲೇ ಮೃತಪಟ್ಟಿದೆ.

ವೈಲ್ಡರ್ ನೆಸ್ಟ್ ರೆಸಾರ್ಟ್ ಮಾಲೀಕ ಅಬ್ದುಲ್ ಕರೀಂ ಖತೀಬ್ ಅವರಿಗೆ ಸೇರಿದ ಶ್ವಾನವಾಗಿದೆ. ಬ್ಲ್ಯಾಕ್ ಪ್ಯಾಂಥರ್ ದಾಳಿ ನಡೆಸಿದ ದೃಶ್ಯಗಳು ರೆಸಾರ್ಟ್‌ ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಘಟನೆ ಬಳಿಕ ರೆಸಾರ್ಟ್ ಸಿಬ್ಬಂದಿಗಳು ಹಾಗೂ ಹಾಸನ್ ಮಾಳ್ ಗ್ರಾಮದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ರೆಸಾರ್ಟ್ ಸುತ್ತಮುತ್ತ ಬ್ಲ್ಯಾಕ್ ಪ್ಯಾಂಥರ್ ಓಡಾಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.