ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಉತ್ತರಕನ್ನಡ (Uttarkannada) ಜಿಲ್ಲೆಯ ಕಾರವಾರದ ಅಂಬೇಡ್ಕರ್ ವೃತ್ತದ(Ambedkar Circle) ಬಳಿ ಇರುವ ತಾಜ್ ಫಾಸ್ಟ್ ಫುಡ್ ಸೆಂಟರ್‌ನಲ್ಲಿ ಅಡುಗೆ ಅನಿಲ ಸೋರಿಕೆಯಿಂದ(Gas Leakage) ಬೆಂಕಿ ಅವಘಡ ಸಂಭವಿಸಿದೆ.
ಫಾಸ್ಟ್ ಫುಡ್ ಸೆಂಟರ್‌ನ ಅಡುಗೆ ಕೋಣೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಪರಿಣಾಮ ಅಡುಗೆ ಕೋಣೆಯಲ್ಲಿದ್ದ(Kitchen Room) ವಸ್ತುಗಳು ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗಣೇಶ್ ಎಂಬುವರಿಗೆ ಸೇರಿದ ಫಾಸ್ಟ್ ಫುಡ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಬ್ಬಂದಿ ಕಕ್ಕಾಬಿಕ್ಕಿಯಾಗಿದ್ದಾರೆ. ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ(Fire Brigade) ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಅಡುಗೆ ಅನಿಲ ಸೋರಿಕೆಯೇ ಬೆಂಕಿ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.
