ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕಾರವಾರ(Karwar) : ಕಾರವಾರ ತಾಲೂಕಿನ ರಾಜ್ಯ ಹೆದ್ದಾರಿ(State HIghway) 6 ರ ಕಾರವಾರ-ದೇವಳಮಕ್ಕಿ-ಕೆರವಡಿ-ಬೋಳ್ವೆ-ಇರಪಾಗೆ-ಮಲ್ಲಾಪುರ ರಸ್ತೆಯಲ್ಲಿ 30 ಟನ್‌ಗಿಂತ ಹೆಚ್ಚಿನ ಭಾರವುಳ್ಳ ಸರಕು ಹಾಗೂ ಬೃಹತ್ ವಾಹನಗಳ ಸಂಚಾರವನ್ನು
ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಬೃಹತ್ ಹಾಗೂ ಅಧಿಕ ಭಾರದ ವಾಹನಗಳ(Heavy Vechicle) ನಿರಂತರ ಸಂಚಾರದಿಂದಾಗಿ ಈ ರಸ್ತೆಯಲ್ಲಿ ದೊಡ್ಡ ಪ್ರಮಾಣದ ಗುಂಡಿಗಳು(PotHole)ಬಿದ್ದು ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಇದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಜೀವಾಪಾಯ ಉಂಟಾಗುವ ಸಾಧ್ಯತೆ ಹೆಚ್ಚಿರುವುದರಿಂದ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಳಾದ ರಸ್ತೆಯನ್ನು ತಕ್ಷಣವೇ ದುರಸ್ತಿಗೊಳಿಸಿ ಸಾರ್ವಜನಿಕರ ಲಘು ವಾಹನಗಳ(Light Vechicle) ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೈಗಾದ ಯೋಜನಾ ನಿರ್ದೇಶಕರಿಗೆ(Kaiga Project Director) ಸೂಚಿಸಲಾಗಿದೆ.
ಲೋಕೋಪಯೋಗಿ ಇಲಾಖೆಯಿಂದ(PWD Department) ವಾಹನ ನಿಷೇಧ ಕುರಿತು ಎಚ್ಚರಿಕಾ ಫಲಕಗಳನ್ನು(Caution Board) ಅಳವಡಿಸುವಂತೆ ಮತ್ತು ರಸ್ತೆ ದುರಸ್ತಿಯಾದ ನಂತರ, ಬೃಹತ್ ವಾಹನಗಳ ಸಂಚಾರಕ್ಕೆ ರಸ್ತೆ ಯೋಗ್ಯವಾಗಿದೆ ಎಂಬ ಕುರಿತು ರಸ್ತೆ ಸುರಕ್ಷತಾ ಪ್ರಮಾಣ ಪತ್ರವನ್ನು(Road Saftey Certificate)
ಸಲ್ಲಿಸಬೇಕು. ಪೊಲೀಸ್ ಇಲಾಖೆಯಿಂದ(Police Department) ಅಗತ್ಯ ಸ್ಥಳಗಳಲ್ಲಿ ಕಡ್ಡಾಯವಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು. ಸಂಚಾರ ದಟ್ಟಣೆ(Trafic Volume) ಉಂಟಾಗದಂತೆ ಸೂಕ್ತ ಕ್ರಮ ವಹಿಸಬೇಕು ಹಾಗೂ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೆ ಯಾವುದೇ ಅಪಘಾತಗಳು ಸಂಭವಿಸದಂತೆ
ನಿಗಾ ವಹಿಸಬೇಕು ಎಂದು ಆದೇಶಿಸಿದ್ದಾರೆ.
