ಇ ಸಮಾಚಾರ ಡಿಜಿಟಲ್‌ ನ್ಯೂಸ್‌ (esamachara digital news)ಕುಮಟಾ(Kumta): ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66(NH 66) ಎಲ್.ಐ.ಸಿ. ಕಚೇರಿ ಬಳಿ ಕಂಟೇನರ್ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ವಿವೇಕ ರಾಮಕೃಷ್ಣ ಶೆಟ್ಟಿ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಸವಾರನ ಮೇಲೆ ಕಂಟೇನರ್ ಹಾಯಿಸಿದ ಚಾಲಕ, ಅಪಘಾತದ ಬೆನ್ನಲ್ಲೇ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ದೃಶ್ಯವು ಅತ್ಯಂತ ಭೀಕರವಾಗಿದ್ದು, ಘಟನೆಯಿಂದ ಇಡೀ ಕುಮಟಾ ಜನತೆ(Kumta People) ತೀವ್ರ ಬೆಚ್ಚಿಬಿದ್ದಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲೇ ಈ ಭೀಕರ ಅಪಘಾತ ಸಂಭವಿಸಿದ್ದರಿಂದ ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದಾಗಿ ಸಾರ್ವಜನಿಕ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು.

ವಿಷಯ ತಿಳಿಯುತ್ತಿದ್ದಂತೆಯೇ ಕುಮಟಾ(Kumta) ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರಸ್ತೆಯಲ್ಲಿದ್ದ ಮೃತದೇಹ ಹಾಗೂ ಬೈಕ್ ಅನ್ನು ಪಕ್ಕಕ್ಕೆ ಸರಿಸಿ, ಅಸ್ತವ್ಯಸ್ತಗೊಂಡಿದ್ದ ವಾಹನ ಸಂಚಾರವನ್ನು ಪೊಲೀಸರು ಸುಗಮಗೊಳಿಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಾರಿಯಾದ ಕಂಟೇನರ್ ಚಾಲಕನಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ(Kumta Police) ಪ್ರಕರಣ ದಾಖಲಾಗಿದೆ.