ಇ ಸಮಾಚಾರ ಡಿಜಿಟಲ್‌ ನ್ಯೂಸ್‌ (esamachara digital news) ಕುಂದಾಪುರ(Kundapur) : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ(NH 66) ಮೀನು ತುಂಬಿದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ಇಲ್ಲಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್(Mullikatte Junction) ಸಮೀಪ ಈ ಅಪಘಾತ ಸಂಭವಿಸಿದ್ದು, ಲಾರಿ ಪಲ್ಟಿಯಾದ ಪರಿಣಾಮ ರಸ್ತೆ ಬದಿಯ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದ ವಲಸೆ ಕಾರ್ಮಿಕರು(Migret Labours) ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಮೀನು ಲಾರಿ(Fish lorry) ಬೈಂದೂರಿನಿಂದ ಕುಂದಾಪುರದ(Bynduru to Kundapur) ಕಡೆಗೆ ತೆರಳುತ್ತಿತ್ತು. ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಮತ್ತೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ರಸ್ತೆಯಿಂದ ಪಕ್ಕಕ್ಕೆ ಚಲಿಸಿ, ರಸ್ತೆ ಬದಿಯ ಚರಂಡಿಗೆ ಮಗುಚಿ ಬಿದ್ದಿದೆ.

ರಸ್ತೆಯ ಪಕ್ಕದಲ್ಲಿದ್ದ ಚರಂಡಿಗೆ ಲಾರಿ ಮಗುಚಿ ಬಿದ್ದ ಪರಿಣಾಮ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದ ಕಾರ್ಮಿಕರು ಸ್ವಲ್ಪದರಲ್ಲಿ ಪ್ರಾಣ ಉಳಿಸಿಕೊಂಡಿದ್ದಾರೆ. ಒಂದು ವೇಳೆ ಚರಂಡಿ ಇಲ್ಲದಿದ್ದರೆ ನೇರವಾಗಿ ಟೆಂಟ್‌ಗಳ ಮೇಲೆ ಬಿದ್ದು, ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಕುಂದಾಪುರ ಪೊಲೀಸ್ ಠಾಣಾ(Kundapur Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.