ಇ ಸಮಾಚಾರ ಡಿಜಿಟಲ್‌ ನ್ಯೂಸ್‌ (esamachara digital news) ಕಾರವಾರ(Karwar): ಅಜ್ಜಿಯೋರ್ವಳ ಮನೆಗೆ ಪ್ರವೇಶಿಸಿ ಬ್ಲೇಡ್ ತೋರಿಸಿ ಬೆದರಿಸಿ ಕುತ್ತಿಗೆಯಲ್ಲಿದ್ದ ಸುಮಾರು 1.20 ಲಕ್ಷ rs ಮೌಲ್ಯದ ಬಂಗಾರದ ಆಭರಣಗಳನ್ನು(Gold Ornaments) ಕಿತ್ತುಕೊಂಡು ಎಸ್ಕೇಪ್ ಆಗಿದ್ದ ಇಬ್ಬರನ್ನ ಹಳಿಯಾಳ ಪೊಲೀಸರು (Haliyal Police)ಬಂಧಿಸಿದ್ದಾರೆ.

ಸೆಪ್ಟೆಂಬರ್ ಏಳರಂದು ಬೆಳಿಗ್ಗೆ 11.30ರ ಸುಮಾರಿಗೆ ಹಳಿಯಾಳದಲ್ಲಿ ಅಜ್ಜಿಯನ್ನು ಭಯಪಡಿಸಿ ಅವರ ಕೊರಳಲ್ಲಿದ್ದ 6 ಕೊಳವೆ, 4 ಗುಂಡು ಹಾಗೂ 2 ತಾಳಿಗಳನ್ನು ಬ್ಲೇಡ್‌ನಿಂದ ಕತ್ತರಿಸಿ ಆರೋಪಿತ ಮಂಜುನಾಥ ಜುಂಜವಾಡಕರ ಆಭರಣಗಳನ್ನು ಸುಲಿಗೆ ಮಾಡಿಕೊಂಡು ಹೋಗಿದ್ದಾನೆ ಎಂದು ದೂರು ದಾಖಲಾಗಿತ್ತು. ಈ ಕುರಿತು ಹಳಿಯಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

ಖಚಿತ ಮಾಹಿತಿ ಆಧರಿಸಿ ಧಾರವಾಡದ(Dharwad) ತಪೋವನ ನಗರದಲ್ಲಿ ಮಂಜುನಾಥ ಶಿವಾಜಿ ಜುಂಜವಾಡಕರ (ಹಂಪಿಹೊಳೆ, ಹಳಿಯಾಳ ತಾಲೂಕು; ಸದ್ಯ ತಪೋವನ ನಗರ, ಧಾರವಾಡ) ಹಾಗೂ ಅರ್ಜುನ್ ಬಸಪ್ಪ ಹಡಪದ (ಹಳ್ಳಿಗೇರಿ, ಧಾರವಾಡ) ಎಂಬುವರನ್ನು ಬಂಧಿಸಿದ್ದಾರೆ.

ಪೊಲೀಸರ ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಆಭರಣಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದನ್ನು ಒಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳಿಂದ ಸುಮಾರು ₹1.20 ಲಕ್ಷ ಮೌಲ್ಯದ ಬಂಗಾರದ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ₹50 ಸಾವಿರ ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ದಾಂಡೇಲಿ ಡಿವೈಎಸ್‌ಪಿ ಶಿವಾನಂದ ಮದರಕಂಡಿ ಅವರ ಮಾರ್ಗದರ್ಶನದಲ್ಲಿ ಹಳಿಯಾಳ ಸಿಪಿಐ ಭೀಮಣ್ಣ ಸೋರಿ ನೇತೃತ್ವದಲ್ಲಿ ಪಿಎಸ್‌ಐಗಳಾದ ಕುಮಾರ್ ಕಾಂಬಳೆ ಹಾಗೂ ಮಹೇಶ ಮಾಳಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರಕರಣ ಭೇದಿಸಿದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ