ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಕಾರವಾರ(Karwar) : ರಾಷ್ಟ್ರೀಯ ಹೆದ್ದಾರಿ 66ರ(NH 66) ಅರ್ಗಾ ಫ್ಲೈಓವರ್‌ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಅಸಹಾಯಕರಾಗಿ ಪ್ರಾಣ ಕಳೆದುಕೊಂಡ ಘಟನೆ ಸಂಭವಿಸಿದೆ.

​ಬಿಣಗಾದ(Binaga) ಒಕ್ಕಲಕೇರಿ ನಿವಾಸಿ, ಬಜಾಜ್ ಫೈನಾನ್ಸ್ ಸಿಬ್ಬಂದಿ ಗಣಪತಿ ಗೌಡ (42) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ.

ಸಂಚರಿಸುತ್ತಿದ್ದ ಬೈಕ್‌ಗೆ ಅಪರಿಚಿತ ವಾಹನವೊಂದು ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಣಪತಿ ಗೌಡ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಇದೇ ವೇಳೆಗೆ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ವಾಹನ ಬಿದ್ದ ಸವಾರನ ಮೇಲೆಯೇ ಹಾದು ಹೋಗಿದ್ದರಿಂದ ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

​ಅಪಘಾತ ಸಂಭವಿಸಿದ ತಕ್ಷಣ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಘಟನೆಗೆ ಸಂಬಂಧಿಸಿದಂತೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆ(Karwar Rural Police Station) ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ಎಸಗಿ ಪರಾರಿಯಾದ ವಾಹನಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.