ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಅಂಕೋಲಾ(Ankola) : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆ ಹಂದಿಗದ್ದೆ ಬಳಿ ಭೀಕರ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ (NH 66) ಕೆಎಸ್ಆರ್ಟಿಸಿ ಬಸ್ (KSRTC Bus) ಹಾಗೂ ಲಾರಿ (Lorry) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮವಾಗಿ ಎರಡು ವರ್ಷದ ಮಗು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಕುಮಟಾದಿಂದ ಅಂಕೋಲಾ(Kumta to Ankola) ಕಡೆಗೆ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಎದುರಿನಿಂದ ಬಂದ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಮಗುವಿನ ಸಾವು: ಅಪಘಾತದಲ್ಲಿ ಮಂಜಗುಣಿಯ 2 ವರ್ಷದ ಕಂದಮ್ಮ ಸ್ಥಳದಲ್ಲೇ ಅಂತಿಮ ಉಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಸ್ ಹಾಗೂ ಲಾರಿ ಚಾಲಕರು ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಪ್ರಯಾಣಿಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಅಧಿಕಾರಿಗಳ ಭೇಟಿ: ವಿಷಯ ತಿಳಿಯುತ್ತಿದ್ದಂತೆ ಅಂಕೋಲಾ ತಹಸೀಲ್ದಾರ್ ನಿಶ್ಚಲ್ ನರೋನಾ ಹಾಗೂ ಸಿಪಿಐ ಚಂದ್ರಶೇಖರ್ ಮಠಪತಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ (Ankola Police Station) ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.