ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news)ಸಾಗರ(Sagar): ತಾಲೂಕಿನಲ್ಲಿ ರಾತ್ರಿ ವೇಳೆಯಲ್ಲಿ ಮಾಟ-ಮಂತ್ರ ಹಾಗೂ ಮೂಢನಂಬಿಕೆ ಆಧಾರಿತ ಅನಿಷ್ಟ ಚಟುವಟಿಕೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಸಾಗರದ ನಗರದ ಸಿಗಂದೂರು(Sagar town Siganduru) ರಸ್ತೆಯ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಇಟ್ಟುಕೊಂಡು ರಹಸ್ಯವಾಗಿ ಪೂಜೆ ನಡೆಸುತ್ತಿದ್ದ ವೇಳೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದಾರೆ. ಇದನ್ನು ಕಂಡು ಬೆಚ್ಚಿಬಿದ್ದ ಸ್ಥಳೀಯರು, ತಕ್ಷಣವೇ ಆ ವ್ಯಕ್ತಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ತಾವು ‘ಉಚ್ಛಾಟನ ಸುದರ್ಶನ ಹೋಮ’ ಮಾಡುತ್ತಿರುವುದಾಗಿ ಪೂಜೆ ಮಾಡುತ್ತಿದ್ದ ವ್ಯಕ್ತಿಗಳು ಸಮರ್ಥಿಸಿಕೊಳ್ಳಲು ಯತ್ನಿಸಿದ್ದಾರೆ.
ಸ್ಥಳಕ್ಕೆ ಪೊಲೀಸರ ಎಂಟ್ರಿ: ಪರಿಸ್ಥಿತಿಯ ಗಂಭೀರತೆ ಅರಿತ ಸ್ಥಳೀಯರು ತಕ್ಷಣವೇ 112 ತುರ್ತು ಸಹಾಯವಾಣಿಗೆ(Helpline) ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಲುಪಿದ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಧಾವಿಸಿದ ಶಿವಮೊಗ್ಗ ಜಿಲ್ಲೆಯ ಸಾಗರ(Shivamogga District Sagara) ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕ ಹಾಗೂ ನಿರ್ಜನ ಸ್ಥಳಗಳಲ್ಲಿ ಇಂತಹ ಮೂಢನಂಬಿಕೆ ಕೃತ್ಯಗಳನ್ನು ಎಸಗಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಎಚ್ಚರಿಕೆಯ ಬೆನ್ನಲ್ಲೇ ಪೂಜಾ ಸಾಮಗ್ರಿಗಳು ಹಾಗೂ ಮಾರಕಾಸ್ತ್ರಗಳೊಂದಿಗೆ ಬಂದಿದ್ದ ವ್ಯಕ್ತಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಸಾಗರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಇಂತಹ ಅನಿಷ್ಟ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ತೀವ್ರವಾಗಿ ಆಗ್ರಹಿಸಿದ್ದಾರೆ.