ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಬೆಂಗಳೂರು(Banglore) : ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿKSRP) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿADGP) ಸೇವೆ ಸಲ್ಲಿಸುತ್ತಿದ್ದ ಹಿರಿಯ ಐಪಿಎಸ್(IPS) ಅಧಿಕಾರಿ ಎಸ್. ರವಿ(S Ravi) ದಿಢೀರ್ ರಾಜೀನಾಮೆ ನೀಡಿದ್ದಾರೆ.
ಅವರ ನಿವೃತ್ತಿಗೆ ಆರು ತಿಂಗಳು ಬಾಕಿ ಇತ್ತು. ಹೀಗಿರುವಾಗಲೇ ಸ್ವಯಂ ನಿವೃತ್ತಿಗೆ (ವಿಆರ್ಎಸ್VRS) ಎಸ್. ರವಿ ಅರ್ಜಿ ಸಲ್ಲಿಸಿದ್ದಾರೆ. ಡಿಜಿ ಐಜಿಪಿ ಸಲೀಂ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದು, ಎಸ್. ರವಿ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ಪತ್ರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಇಲಾಖೆಯ ಒಳಗಿನ ಕೆಲ ಬೆಳವಣಿಗೆಗಳು, ಮನಸ್ತಾಪಗಳು ರಾಜೀನಾಮೆಗೆ ಕಾರಣ ಎನ್ನಲಾಗುತ್ತಿದೆ. ಈ ಕುರಿತು ಇಲಾಖೆಯ ಹಿರಿಕಿರಿಯ ಅಧಿಕಾರಿಗಳಿಂದ ವ್ಯಾಪಕ ಚರ್ಚೆ ನಡೆಯುತ್ತಿದೆ.