ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಕಾರವಾರ(Karwar): ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಎ.ಡಿ.ಆರ್. ಕಚೇರಿ ಆವರಣದಲ್ಲಿ ದಸರಾ ಹಬ್ಬದ ನಿಮಿತ್ತ ದೇವಿಯ ಆರಾಧನೆ ಹಾಗೂ ಆಯುಧ ಪೂಜೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

 ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಆರತಿ ಮಾಡುವ ಮೂಲಕ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಮಹಿಳಾ ನ್ಯಾಯಾಧೀಶರು, ನ್ಯಾಯವಾದಿಗಳು ಹಾಗೂ ಸಿಬ್ಬಂದಿಗಳಿಂದ ಅರಿಶಿಣ-ಕುಂಕುಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪೂಜಾ ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ಇತರೇ ಕೋರ್ಟ್‌ನ ನ್ಯಾಯಾಧೀಶರುಗಳು, ಸರ್ಕಾರಿ ವಕೀಲರು, ನ್ಯಾಯವಾದಿಗಳು, ಸಿಬ್ಬಂದಿಗಳು, ಪಿ.ಎಲ್.ವಿ. ಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.