ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಗೋಕರ್ಣ(Gokarn) : ಪ್ರಸಿದ್ಧ ಪ್ರವಾಸಿ ತಾಣವಾದ(Famous Tourist Place) ಗೋಕರ್ಣದ ಕುಡ್ಲೆ ಕಡಲ ತೀರದಲ್ಲಿ (Kudle Beach) ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ವಾಟರ್ ಸ್ಪೋರ್ಟ್ಸ್(Watersports) ಸಿಬ್ಬಂದಿಗಳು ಸಮಯೋಚಿತವಾಗಿ ರಕ್ಷಿಸಿದ ಘಟನೆ ನಡೆದಿದೆ.
ಉತ್ತರ ಕನ್ನಡ(Uttarkannada) ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಬೀಚ್ನಲ್ಲಿ(Gokarn Kudle Beach) ಈ ಘಟನೆ ನಡೆದಿದೆ. ದೇವರಾಜ್ (24) ಹಾಗೂ ಅರವಿಂದ (25) ರಕ್ಷಣೆಗೊಳಗಾದ ಪ್ರವಾಸಿಗರು ಎಂದು ಗುರುತಿಸಲಾಗಿದೆ.
ಪ್ರವಾಸಿಗರಿಬ್ಬರು ಕಡಲ ತೀರದಲ್ಲಿ ನೀರಿನಲ್ಲಿ ತೆರಳುತ್ತಿದ್ದ ವೇಳೆ ಅನಿರೀಕ್ಷಿತವಾಗಿ ಸಮುದ್ರದ ಸುಳಿಗೆ ಸಿಲುಕಿಕೊಂಡಿದ್ದು, ನೀರಿನ ಸೆಳೆತಕ್ಕೆ ಕೊಚ್ಚಿಹೋಗುತ್ತಿದ್ದರು. ಇದನ್ನು ಗಮನಿಸಿದ ಗೋಕರ್ಣ ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್(Gokarn Adventure water Sports) ಸಿಬ್ಬಂದಿಗಳು ತಕ್ಷಣವೇ ಎಚ್ಚೆತ್ತುಕೊಂಡಿದ್ದಾರೆ. ತಕ್ಷಣ ಜೆಟ್ ಸ್ಕೀ (Jet Ski) ಮೂಲಕ ಸಮುದ್ರದ ಮಧ್ಯಕ್ಕೆ ತೆರಳಿ ಪ್ರವಾಸಿಗರನ್ನು ಸುರಕ್ಷಿತವಾಗಿ ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಕಾಲದಲ್ಲಿ ಸಿಬ್ಬಂದಿಗಳು ಸ್ಪಂದಿಸಿದ್ದರಿಂದ ಭಾರೀ ಅಪಾಯ ತಪ್ಪಿದಂತಾಗಿದ್ದು, ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಕುರಿತು ಗೋಕರ್ಣ ಪೊಲೀಸ್ ಠಾಣಾ(Gokarn Police Station) ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಡಲ ತೀರಕ್ಕೆ ಬರುವ ಪ್ರವಾಸಿಗರು ಸಮುದ್ರದ ಆಳ ಹಾಗೂ ಅಲೆಗಳ ರಭಸವನ್ನು ಅರಿಯದೆ ನೀರಿಗೆ ಇಳಿಯದಂತೆ ಸ್ಥಳೀಯರು ಮತ್ತು ಆಡಳಿತ ಮಂಡಳಿ ಎಚ್ಚರಿಕೆ ನೀಡಿದೆ.