ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಕಾರವಾರ(Karwar) : ಅಕ್ಟೋಬರ್ 23ರಂದು ನಡೆಯುವ ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರನ್ನು ಭರ್ಜರಿ ಬಹುಮತದಿಂದ ಗೆಲ್ಲಿಸುವಂತೆ ಕಾರವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಸೂರಜ್ ಕುರುಮಕರ್ ಮನವಿ ಮಾಡಿದ್ದಾರೆ.

ಈಗಾಗಲೇ ಅಭ್ಯರ್ಥಿ ಪರವಾಗಿ ಕಾರವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿಯ ಮುಖಂಡರು ಹಾಗೂ ವಿವಿಧ ಸೆಲ್ಗಳ ಪರವಾಗಿ ಸೂರಜ್ ಅವರು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತಯಾಚನೆ ನಡೆಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರ ಕ್ರಮ ಸಂಖ್ಯೆ 01ಕ್ಕೆ ಮತ ಚಲಾಯಿಸಿ, ಅವರನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಬೇಕೆಂದು ಅವರು ಪದವಿಧರ ಮತದಾರರನ್ನ ಕೋರಿದ್ದಾರೆ.
ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಮತದಾರರ ಬೆಂಬಲ ಮಹತ್ವದ್ದಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಪದವೀಧರರು ತಮ್ಮ ಅಮೂಲ್ಯ ಮತವನ್ನು ಕಾಂಗ್ರೆಸ್ ಅಭ್ಯರ್ಥಿಗೆ ನೀಡುವಂತೆ ಸೂರಜ್ ಕುರುಮಕರ್ ಮನವಿ ಮಾಡಿದ್ದಾರೆ.
ಪದವೀಧರ ಮತದಾರರು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮೋಹನ್ ಲಿಂಬಿಕಾಯಿ ಅವರಿಗೆ ಬೆಂಬಲ ನೀಡಬೇಕು. ಮತಪತ್ರದಲ್ಲಿ ಕ್ರಮ ಸಂಖ್ಯೆ 01ಕ್ಕೆ ಪ್ರಾಶಸ್ತ್ಯದ ಮತ ಚಲಾಯಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕೈಜೋಡಿಸಬೇಕು ಎಂದು ಸೂರಜ್ ಮತ್ತೊಮ್ಮೆ ಮನವಿ ಮಾಡಿದ್ದಾರೆ.