ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news) ಕಾರವಾರ(Karwar): ಕಾಳಿ ಸೇತುವೆಯ(Kali Bridge) ಮೇಲೆ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸೋಮವಾರ ಸಂಜೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ತೀವ್ರವಾಗಿದ್ದ ಕಾರಣ, ಸವಾರರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಂದು ದ್ವಿಚಕ್ರ ವಾಹನದ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಕಾರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಬೈಕ್ ಸದಾಶಿವಗಢ(Sadashivaghada) ಕಡೆಯಿಂದ ಮತ್ತೊಂದು ಬೈಕ್ ಕಾರವಾರ(Karwar) ಕಡೆಯಿಂದ ತೆರಳುತಿತ್ತು ಎನ್ನಲಾಗಿದೆ.
ಅಪಘಾತದ ಬಳಿಕ, ಕಾಳಿ ಸೇತುವೆಯ(Kali Bridge) ಮೇಲೆ ಸಂಚಾರ ಸ್ವಲ್ಪ ಸಮಯದವರೆಗೆ ಅಸ್ತವ್ಯಸ್ತವಾಯಿತು. ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದರು. ಬಳಿಕ ಹೆದ್ದಾರಿಯಲ್ಲಿ ಆಗಿರುವ ಟ್ರಾಫಿಕ್ ಸಮಸ್ಯೆಯನ್ನು ಸರಿಪಡಿಸಿದ್ದಾರೆ.
ಮೃತ ರಾಜಸ್ಥಾನ(Rajasthan) ಮೂಲದವನೆಂದು ಹೇಳಲಾಗುತ್ತಿದ್ದು ಗುರುತು ಪತ್ತೆಯಾಗಿಲ್ಲ. ಗಾಯಗೊಂಡ ಸವಾರನ ಗುರುತುಗಳು ಇನ್ನೂ ದೃಢಪಟ್ಟಿಲ್ಲ. ಪೊಲೀಸರು ಹೆಚ್ಚಿನ ತನಿಖೆಯನ್ನು ಪ್ರಾರಂಭಿಸಿದ್ದಾರೆ.