ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಅಂಕೋಲಾ(Ankola): ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ(NH 66) ಅಂಬೇಡ್ಕರ್ ಸರ್ಕಲ್ ಬಳಿ ತಡರಾತ್ರಿ ಅನಿಲ (Gas) ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದೆ.
ರಾತ್ರಿ ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ(Manglore to Hubli) ಅನಿಲ ತುಂಬಿಕೊಂಡು ಟ್ಯಾಂಕರ್ ತೆರಳುತ್ತಿತ್ತು. ಮಳೆ ಸುರಿಯುತ್ತಿದ್ದ ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ರಸ್ತೆ ಪಕ್ಕದಲ್ಲೇ ಪಲ್ಟಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಟ್ಯಾಂಕರ್ ಪಲ್ಟಿಯಾದ ಸ್ಥಳದ ಅಕ್ಕಪಕ್ಕದಲ್ಲಿ ಜನವಸತಿ ಪ್ರದೇಶವಿರುವುದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವಣರ ನಿರ್ಮಾಣವಾಗಿತ್ತು. ಘಟನೆಯಿಂದ ಯಾವುದೇ ರೀತಿಯಲ್ಲಿ ಅನಿಲ ಸೋರಿಕೆ ಆಗಿಲ್ಲ ಎಂದು ತಿಳಿದುಬಂದಿದೆ.
ಅಂಕೋಲಾ ಪೊಲೀಸರು(Ankola Police) ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಪಿಎಸೈ ಸುನೀಲ್ ಹುಳ್ಳೊಳ್ಳಿ ಸ್ಥಳದಲ್ಲಿ ಪರಿಶೀಲನೆ ನಡೆಸಿ, ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
