ಕಾರವಾರ : ಉತ್ತರಕನ್ನಡ ಜಿಲ್ಲೆಯಾದ್ಯಂತ 78 ನೇ ಸ್ವಾತಂತ್ರ್ಯಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟವರಿಗೆ ಮೌನಾಚರಣೆ ಮಾಡಲಾಯಿತು. ಜಿಲ್ಲೆಯಲ್ಲಿ ವಿಪತ್ತು ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡಿದ ಕೆಲ ಇಲಾಖೆಯ ಸಿಬ್ಬಂದಿಗಳನ್ನ ಸನ್ಮಾನಿಸಲಾಯಿತು.
ಪೊಲೀಸ್, ಗೃಹರಕ್ಷಕ ದಳ, ಅರಣ್ಯ, ಎನ್ ಸಿಸಿ, ಸ್ಕೌಟ್ ಗೈಡ್ಸ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೆಕರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಾರಾಯಣ ಎಂ, ಜಿಲ್ಲಾ ಪಂಚಾಯತ್ ಸಿಇಓ ಈಶ್ವರ್ ಕಾಂದು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.