ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಪುತ್ತೂರು : ಮಹಿಳೆಯೋರ್ವಳ ಅಸ್ಥಿ ಪಂಜರ ಮನೆಯ ಎದುರಿನ ಕಾಡೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಪುತ್ತೂರು(putturu) ಸಮೀಪದ ಒಳಮೊಗ್ರು ಗ್ರಾಮದ(Olamogru) ಉರ್ವದಲ್ಲಿ (Urva) ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ ಎಂಬಾಕೆ ಮೃತ ದೇಹವಾಗಿದೆ. ಒಂದು ತಿಂಗಳ ಬಳಿಕ ಸಾವನ್ನಪ್ಪಿರುವುದು ಗೊತ್ತಾಗಿದೆ. ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ(Putturu rural station) ಪೊಲೀಸರು ಭೇಟಿ ನೀಡಿದ್ದು, ತಲೆ ಬುರುಡೆ ಹಾಗೂ ಎಲುಬುಗಳನ್ನು ಪರೀಕ್ಷೆಗಾಗಿ ಕೊಂಡೊಯ್ದಿದ್ದಾರೆ.

ಸಂಜೀವ ಎಂಬವರು ಕನ್ಯಾನದಿಂದ ನಳಿನಿ ಅವರನ್ನ ಒಂದೂವರೆ ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ (Dharmasthala) ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗಿದ್ದರು.  ನಳಿನಿಯವರು ಆಗಾಗ ತನ್ನ ತಾಯಿ ಮನೆಗೆ ಹೋಗುತ್ತಿದ್ದರು ಎಂದು ಹೇಳಲಾಗಿದ್ದು, ಕಳೆದ ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಸಂಜೀವ ಅಕ್ಟೋಬರ್ ಎಂಟರಂದು  ಸಂಪ್ಯ ಪೊಲೀಸ್‌ ಠಾಣೆಗೆ(Sampya police Station) ತೆರಳಿ ತನ್ನ ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ತಿಳಿಸಿದ್ದರು. ಪತ್ನಿಯ ಫೋಟೋ ತರುವಂತೆ ಠಾಣೆಯಲ್ಲಿ ತಿಳಿಸಿದ್ದರು. ಆದರೆ, ಆ ಬಳಿಕ ಸಂಜೀವ ಪುನಃ ಠಾಣೆಗೆ ತೆರಳಿ ದೂರು ನೀಡಿರಲಿಲ್ಲ ಎಂದು ಹೇಳಲಾಗಿದೆ.

ನಳಿನಿಯವರು ತನ್ನ ತವರು ಮನೆಗೂ ಹೋಗದೇ ನಾಪತ್ತೆಯಾಗಿರುವ ವಿಷಯ ತಿಳಿದು ತವರು ಮನೆಯವರು ಉರ್ವದ ಸಂಜೀವ ಅವರ ಮನೆಯ ಸುತ್ತಮುತ್ತ ನವೆಂಬರ್ ಎರಡರಂದು ಸಂಜೆ  ಹುಡುಕಾಡಿದ್ದಾರೆ. ಈ ವೇಳೆ ಮನೆಯ ಎದುರಿನ ಗುಡ್ಡದ ತುದಿಯಲ್ಲಿ ಮರವೊಂದಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಹಗ್ಗ ಇದ್ದು ಹಗ್ಗದಲ್ಲಿ ತಲೆ ಕೂದಲು ಪತ್ತೆಯಾಗಿದೆ. ಹಗ್ಗದ ಕೆಳಗೆ ತಲೆ ಬುರುಡೆ ಹಾಗೂ ಕೈ ಮತ್ತು ಕಾಲಿನ ಎಲುಬುಗಳು ಪತ್ತೆಯಾಗಿದೆ.

ಸ್ಥಳಕ್ಕೆ ತಹಶೀಲ್ದಾ‌ರ್ ಪುರಂದರ ಹೆಗ್ಡೆ ಹಾಗೂ ಸಂಪ್ಯ ಪಿಎಸ್‌ಐ ತನಿಖಾ ವಿಭಾಗದ ಸುಷ್ಮಾ ಭಂಡಾರಿ ಹಾಗೂ ಸಿಬ್ಬಂದಿಗಳುಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ : ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಹೃದಯಘಾತದಿಂದ ಸಾವು

ಹಿರಿಯ ಸಾಹಿತಿ, ನ್ಯಾಯವಾದಿ ಶಂಕರ್ ನಾಯ್ಕ್ ಅವರಿಗೆ ಕಲಾಸಿರಿ ಪ್ರಶಸ್ತಿ

ಮಾನವೀಯ ಗುಣ ಬಿಟ್ಟು ಹೋದ ಗುರುಪ್ರಸಾದ್