ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಯಲ್ಲಾಪುರ (Yallapura): ತಾಲೂಕಿನ ಅರೆಬೈಲ್ ಘಟ್ಟದಲ್ಲಿ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟ ಘಟನೆ ಸಂಭವಿಸಿದೆ.

ಯಲ್ಲಾಪುರದಿಂದ ಅಂಕೋಲಾ ಕಡೆ ಚಲಿಸುತ್ತಿದ್ದ ಲಾರಿ  ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ತಂದೆ, ತಾಯಿ-ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶ್ರೀಕಾಂತ ರೆಡ್ಡಿ(37),  ಅವರ ಪತ್ನಿ ಚೈತ್ರ ಆರ್ (31) ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ.

ಬುಧವಾರ ನಸುಕಿನಲ್ಲಿ ಈ ಅಪಘಾತ ನಡೆದಿದೆ. ಅರೆಬೈಲ್ ಘಟ್ಟದ ಇಳಿಜಾರಿನಲ್ಲಿ  ಅತಿ ವೇಗದಿಂದ ಬಂದ ಲಾರಿ ಅಪಘಾತಕ್ಕೆ ಕಾರಣವಾಗಿದೆ. ಕೊಪ್ಪಳದ ಶ್ರೀಕಾಂತ ರೆಡ್ಡಿ ಅವರು ತಮ್ಮ ಕುಟುಂಬದೊಂದಿಗೆ ಅಂಕೋಲಾದಿಂದ ಹುಬ್ಬಳ್ಳಿ ಕಡೆ ಚಲಿಸುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಗುದ್ದಿದೆ.

ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ : ಪ್ರೇಮಿಗಳಿಗೆ ನಿವೇದಿಸಿ ನೇಣಿಗೆ ಕೊರಳೊಡ್ಡಿದ ಯುವಕ. ಅಂಕೋಲಾದಲ್ಲೊಂದು ಹೃದಯವಿದ್ರಾವಕ ಘಟನೆ.

ಭಟ್ಕಳದಲ್ಲಿ ಮೂವರು ಯುವಕರಿಂದ ಓರ್ವನ ಮೇಲೆ ಚಾಕುವಿನಿಂದ ಹಲ್ಲೆ

  ಶಿಫಾನಾ ಬೇಗಂ ಕಲ್ಲೂರ್‌ಗೆ ಡಾಕ್ಟರೇಟ್‌ ಪದವಿ ಪ್ರದಾನ

ಫೆಬ್ರವರಿ 28ರಂದು ಉದಾಯೊನ್ಮುಖ ಪ್ರತಿಭೆಯ ಪ್ರತ್ಯರ್ಥ ಸಿನೆಮಾ ಬಿಡುಗಡೆ.

ತಹಸೀಲ್ದಾರ ಕಚೇರಿಯಲ್ಲಿ ಸಾರ್ವಜನಿಕ ಎದುರೇ ಡಿಶುಮ್ ಡಿಶುಮ್