ಚಿಕ್ಕೋಡಿ (CHIKKODI): ಎಂಟು ವಾಹನಗಳ ನಡುವೆ ಸರಣಿ ಅಪಘಾತ (SERIAL ACCIDENT) ಸಂಭವಿಸಿದ ಘಟನೆ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ನಡೆದಿದೆ.
ಸರಣಿ ಅಪಘಾತದಲ್ಲಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ (NIPPANI) ಖಡಕಲಾಟ ಗ್ರಾಮದ ಗಣಪತಿ ಮಾನೆ (45), ರೇಖಾ ಗಾಡಿವಡ್ಡರ, ಜಲೀನ್ ಮಂಕಾದಾರ (58), ದಿಲ್ದಾರ್ ಮುಲ್ಲಾ (61) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ.
ಮೂರು ಕಾರು, ಎರಡು ಲಾರಿ, ಒಂದು ಕಂಟೇನರ್ ಹಾಗೂ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಗಳಿಗೆ ಕಂಟೇನರ್ ಗುದ್ದಿದ ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ಒಟ್ಟು ಬೈಕ್ ಮೇಲಿದ್ದ ಇಬ್ಬರು, ವ್ಯಾಗನಾರ ಕಾರ್‌ನಲ್ಲಿದ್ದ ಇಬ್ಬರು ಮೃತರಾಗಿದ್ದಾರೆ. ಗಾಯಾಳುಗಳಿಗೆ ನಿಪ್ಪಾಣಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಕಂಟೇನರ್ ವಾಹನದ ಚಾಲಕನ ನಿರ್ಲಕ್ಷ್ಯವೆ ಘಟನೆಗೆ ಕಾರಣ ಎನ್ನಲಾಗಿದೆ. ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ತಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಇದನ್ನು ಓದಿ : ವಿಶ್ವ ದಾಖಲೆ ಬರೆದ ಪ್ರಜಾಪ್ರಭುತ್ವ ದಿನಾಚರಣೆ