ಇ ಸಮಾಚಾರ ಡಿಜಿಟಲ್ ನ್ಯೂಸ್(esamachara digital news)ಅಂಕೋಲಾ (Ankola):ರಾಷ್ಟ್ರೀಯ ಹೆದ್ದಾರಿ(National Highway) ತಾಲೂಕಿನ ಸರಳೆಬೈಲ್ ಬಳಿ ಸೋಮವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಬಸ್(KSRTC Bus) ಹಾಗೂ ಟ್ಯಾಂಕರ್(Tanker) ನಡುವೆ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರವಾರದಿಂದ ಅಂಕೋಲಾ(Karwar to Ankola) ಮಾರ್ಗವಾಗಿ ಹುಬ್ಬಳ್ಳಿ(Hubli) ಕಡೆಗೆ ತೆರಳುತ್ತಿದ್ದ ಬಸ್ಗೆ , ಅಗಸೂರು ಸಮೀಪದ ಸರಳೆಬೈಲ್ ಬಳಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮವಾಗಿ ಅಪಘಾತದಲ್ಲಿ ಐವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ(Ankola Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.