ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news): ಶಿರಸಿ(Sirsi) : ಉತ್ತರಕನ್ನಡ ಜಿಲ್ಲೆಯ ಶಿರಸಿ(Sirsi) ತಾಲೂಕಿನ ಹಾರುಗಾರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ವೆಂಕಟ್ರಮಣ ಗಣಪ ಗೌಡ (36) ಎಂದು ಗುರುತಿಸಲಾಗಿದೆ. ಹಾರುಗಾರದಿಂದ ಹನುಮಂತಿ(Harugar to Hanumanti) ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ಮೋರಿಯ ಕೆಳಗೆ ಹಾರಿ ಬಿದ್ದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರ ವೆಂಕಟ್ರಮಣ ಗಣಪ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್‌ನ ಹಿಂಬದಿ ಕುಳಿತಿದ್ದ ತಾಯಿ ಹಾಗೂ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಶಿರಸಿ ಸಂಚಾರಿ ಠಾಣೆಯ(Sirsi Traffic Station) ಪಿ.ಎಸ್.ಐ. ದೇವೇಂದ್ರ ನಾಯ್ಕ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಶಿರಸಿ ಸಂಚಾರಿ ಪೊಲೀಸ್ ಠಾಣೆಯಲ್ಲಿ(Traffic Police Station) ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಇದನ್ನು ಓದಿ : ಬೈಕ್ ಓಡಿಸಲು ಕೊಟ್ಟವನಿಗೆ 25 ಸಾ. ರೂ. ದಂಡ. ಪಾಲಕರೇ ಎಚ್ಚರ!
