ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಬೆಂಗಳೂರು(Bangalore) : ಬೈಕೊಂದು ಖಾಸಗಿ ಬಸ್ಗೆ ಢಿಕ್ಕಿ(Accident) ಹೊಡೆದ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡು 20 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ(Andrapradesh) ಕರ್ನೂಲ್ ಹೆದ್ದಾರಿಯಲ್ಲಿ(Karnul Highway) ಇಂದು ಮುಂಜಾನೆ ಸಂಭವಿಸಿದೆ.
ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ(NH-44) ಚಿನ್ನತೇಕೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದಾರೆ.
ಬಸ್ ಬೆಂಗಳೂರಿನಿಂದ ಹೈದರಾಬಾದ್(Bangalore to Hyderbad) ಕಡೆಗೆ ತೆರಳುತ್ತಿದ್ದಾಗ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಚಿನ್ನತೇಕೂರು ಗ್ರಾಮದ(Chinnatekuru Village) ಬಳಿ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಪರಿಣಾಮವಾಗಿ ಬೈಕ್ ವಾಹನದ ಕೆಳಗೆ ಸಿಲುಕಿಕೊಂಡಿತು, ಕೂಡಲೇ ಬೆಂಕಿ ಹತ್ತಿಕೊಂಡು ಇಡೀ ಬಸ್ಸನ್ನು ವ್ಯಾಪಿಸಿ ಸುಟ್ಟು ಕರಕಲಾಗಿದೆ.
ಬಸ್ನಲ್ಲಿ ಸುಮಾರು 42 ಪ್ರಯಾಣಿಕರಿದ್ದರು. ತುರ್ತು ನಿರ್ಗಮನ ಮತ್ತು ಕಿಟಕಿ ಗಾಜುಗಳನ್ನು ಒಡೆದು 12 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದರೆ, ಬೆಂಕಿಯು(Fire) ಬಸ್ ನ್ನ ವ್ಯಾಪಿಸಿದ್ದರಿಂದ ಹಲವರು ಒಳಗೆ ಸಿಲುಕಿಕೊಂಡು ಒದ್ದಾಡಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು(Fire Brigade) ಧಾವಿಸಿ ಗಾಯಾಳುಗಳನ್ನು ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ(Karnul government Hospital) ದಾಖಲಿಸಿದರು.
ಅಪಘಾತದ ನಂತರ ಬಸ್ ಚಾಲಕ ಸೇರಿದಂತೆ ಬಸ್ ಸಿಬ್ಬಂದಿ ಬಚಾವಾಗಿ ಸ್ಥಳದಿಂದ ಪರಾರಿಯಾಗಿದ್ದಾರೆ . ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲ ತಾಸುಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : 69 ವರ್ಷದ ಸತ್ತ ವ್ಯಕ್ತಿ ಚಿತೆಯಲ್ಲಿ ಎದ್ದ. ವೈದ್ಯಕೀಯ ಲೋಕದಲ್ಲಿ ಮತ್ತೊಂದು ಅಚ್ಚರಿಯ ಘಟನೆ.
ನಾಳೆಯಿಂದ ಮೂರು ದಿನ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ.
ನಕಲಿ ಫೇಸ್ಬುಕ್ ಖಾತೆಯ ಮೂಲಕ ಸಚಿವ ಮಂಕಾಳ ವೈದ್ಯ ವಿರುದ್ದ ಅವಹೇಳನಕಾರಿ ಪೋಸ್ಟ್. ಓರ್ವ ಆರೆಸ್ಟ್.

