ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ದಾಂಡೇಲಿ(Dandeli) : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ(Collision) ನಾಲ್ವರು ಗಾಯಗೊಂಡ ಘಟನೆ ನಗರದ ಅಂಬೇವಾಡಿಯಲ್ಲಿ(Ambewadi) ನಡೆದಿದೆ.
ಅಂಬೇವಾಡಿ ಗಾವಂಠಾಣ ನಿವಾಸಿ ಇಮ್ತಿಯಾಜ್ ಶಾಹೀದ್ ಪಟೇಲ್ ಅವರು ತನ್ನಿಬ್ಬರು ಮಕ್ಕಳೊಂದಿಗೆ ಬೈಕಿನಲ್ಲಿ ಗಾವಟಾಣದಿಂದ ದಾಂಡೇಲಿಗೆ(Dandeli) ಬರುತ್ತಿರುವಾಗ ಅಂಬೇವಾಡಿ ರೈಲ್ವೆ ನಿಲ್ದಾಣದ(Ambewadi Railway Station) ಹತ್ತಿರದ ರಾಜ್ಯ ಹೆದ್ದಾರಿಯಲ್ಲಿ ದಾಂಡೇಲಿ ನಗರದಿಂದ ಅಂಬೇವಾಡಿ ಕಡೆ ವೇಗವಾಗಿ ಬರುತ್ತಿದ್ದ ಸ್ಕೂಟಿಯೊಂದು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇಮ್ತಿಯಾಜ್ ಶಾಹೀದ್ ಪಟೇಲ್ ಹಾಗೂ ಅವರಿಬ್ಬರು ಮಕ್ಕಳಿಗೆ ತೀವ್ರ ಸ್ವರೂಪದ ಗಾಯವಾಗಿದೆ. ಸ್ಕೂಟಿಯನ್ನು ಚಲಾಯಿಸುತ್ತಿದ್ದ ಸವಾರ ಭೀಮರಾವ್ ಮಲ್ಲಪ್ಪ ಕೆಂಬಾವಿ ಎಂಬಾತ ಬಸವೇಶ್ವರ ನಗರದ ನಿವಾಸಿಯಾಗಿದ್ದು, ಈತನಿಗೂ ಗಾಯವಾಗಿದೆ.
ಗಾಯಗೊಂಡ ನಾಲ್ವರನ್ನು ತಕ್ಷಣವೇ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಳುಗಳಿಗೆ ತೀವ್ರ ಸ್ವರೂಪದ ಗಾಯವಾದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ನಾಲ್ವರನ್ನು ಧಾರವಾಡಕ್ಕೆ ರವಾನಿಸಲಾಗಿದೆ.
ಸ್ಥಳಕ್ಕೆ ಮತ್ತು ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಠಾಣೆಯ (Dandeli Rural Station) ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ : ಬೋಟಲ್ಲಿ ಕುಸಿದು ಬಿದ್ದು ಕಾರ್ಮಿಕ ಅನುಮಾನಾಸ್ಪದ ಸಾವು.