ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಕುಂದಾಪುರ(Kundapura) : ತ್ರಾಸಿ ಬೀಚ್(Trasi Beach) ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ(NH 66) ಅರಮ ದೇವಸ್ಥಾನದ ಎದುರು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಮತ್ತೊಂದು ಬೈಕ್‌ನಲ್ಲಿದ್ದ ತಂದೆ ಹಾಗೂ ಮಗಳು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಟ್ಕಳ(Bhatkal) ತಾಲೂಕಿನ ಸಣಬಾವಿ ಸಾತುಮನೆಯ ದೀಪಕ್ ನಾಗಪ್ಪ ನಾಯ್ಕ (23) ಮೃತ ದುರ್ದೈವಿ. ಗಾಯಾಳುಗಳು ಪಡುಕೋಣೆ ಹಡವು ನಿವಾಸಿ ಪ್ಯಾಟ್ರಿಕ್ ವಾಝ್ (63) ಹಾಗೂ ಅವರ ಪುತ್ರಿ ಪ್ಲೆನ್ಸಿಟಾ (24) ಎಂದು ಗುರುತಿಸಲಾಗಿದೆ.
ಪ್ಯಾಟ್ರಿಕ್ ಅವರು ತಮ್ಮ ಪುತ್ರಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಬರುತ್ತಿದ್ದ ವೇಳೆ ಎದುರಿನಿಂದ ಬಂದ ದೀಪಕ್ ಚಲಾಯಿಸುತ್ತಿದ್ದ ಬೈಕ್‌ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಮೂವರೂ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೀಪಕ್ ನಾಗಪ್ಪ ನಾಯ್ಕ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗಾಯಗೊಂಡಿರುವ ಪ್ಯಾಟ್ರಿಕ್ ವಾಝ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ(Manipal Hospital) ದಾಖಲಿಸಲಾಗಿದ್ದು, ಪುತ್ರಿ ಪ್ಲೆನ್ಸಿಟಾ ಕುಂದಾಪುರದ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ(Gangolli Police Station) ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.
