ಹೊನ್ನಾವರ(Honnavar) : ಪ್ರವಾಸಿಗರ ಬಸ್ ಪಲ್ಟಿಯಾಗಿ(Bus accident) ಹಲವು ಮಂದಿ ಗಾಯಗೊಂಡ ಘಟನೆ ಹೊನ್ನಾವರ(Honnavar) ತಾಲೂಕಿನ ಬಾಳೆಗದ್ದೆ ತಿರುವಿನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇನ್ನೂ ಸಣ್ಣಪುಟ್ಟ ಗಾಯಗೊಂಡ ಹತ್ತಕ್ಕೂ ಹೆಚ್ಚು ಜನರನ್ನ 108 ಹಾಗೂ ಖಾಸಗಿ ಅಂಬುಲೆನ್ಸ್ ಮೂಲಕ ಹೊನ್ನಾವರ ಸರಕಾರಿ ಆಸ್ಪತ್ರೆಗೆ(Honnavar Government Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಿಂದ ಗೋಕರ್ಣಕ್ಕೆ(Bangalore-Gokarn) ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್‌ನಲ್ಲಿ ಒಟ್ಟು 20 ಮಂದಿ ಪ್ರಯಾಣಿಕರಿದ್ದರು. ಗಂಭೀರ ಗಾಯಗೊಂಡವರನ್ನ ಮಣಿಪಾಲ ಆಸ್ಪತ್ರೆಗೆ (Manipal Hospital) ರವಾನಿಸಲಾಗಿದೆ.
ಇನ್ನೂ ಘಟನಾ ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ(Honnavar Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನು ಓದಿ : ಭಟ್ಕಳದಲ್ಲಿ ರಕ್ತಸ್ರಾವದಿಂದ ಸರ್ವೆಯರ್ ಸಾವು.
ಚಿರತೆ ಸಾವು. ಅರಣ್ಯ ಇಲಾಖೆಯ ಸಿಬ್ಬಂದಿಗಳಿಂದ ಅಂತ್ಯಕ್ರಿಯೆ