ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಹೊನ್ನಾವರ (Honnavar): ಉತ್ತರಕನ್ನಡ ಜಿಲ್ಲೆಯ ಹೊನ್ನಾವರ (Honnavar) ತಾಲೂಕಿನ ಉಪ್ಪೋಣಿ(Upponi) ಬಳಿ ಭೀಕರ ಅಪಘಾತ ಸಂಭವಿಸಿದೆ.
ಕೆಎಸ್ ಆರ್ ಟಿಸಿ ಬಸ್(Ksrtc Bus) ಹಾಗೂ ಸ್ಕಾರ್ಪಿಯೋ(Scorpio) ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ರಕ್ಷಿತ್ ಮತ್ತು ಶ್ರೀನಿವಾಸ ಮೃತ ದುರ್ದೈವಿಗಳು.
ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಬಸ್ ಹಾಗೂ ಸಾಗರ ಕಡೆಯಿಂದ ಮುರ್ಡೇಶ್ವರ್ ಕಡೆ ತೆರಳುತ್ತಿದ್ದ ಸ್ಕಾರ್ಪಿಯೋ ವಾಹನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಸ್ಕಾರ್ಪಿಯೋ ಸಂಪೂರ್ಣ ಜಖಂಗೊoಡಿದ್ದು, ಇನ್ನೂ ಮೂವರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನ ಉಡುಪಿ (Udupi) ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಸ್ಥಗಿತವಾಗಿತ್ತು. ಬಸ್ ನಲ್ಲಿದ್ದ ಕೆಲವರು ಗಾಯಗೊಂಡಿದ್ದು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊನ್ನಾವರ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ(Honnavar Police Station) ಪ್ರಕರಣ ದಾಖಲಾಗಿದೆ.
ಇದನ್ನು ಓದಿ : ಕಾರವಾರದ ಸತೀಶ್ ಹತ್ಯೆ. ಪೊಲೀಸ್ ವಶದಲ್ಲಿ ಪ್ರಮುಖ ಆರೋಪಿ.
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಜೀವಕ್ಕೆ ಮುಳುವಾದ ಜೋಯಿಡಾದ ಆಸ್ತಿ