ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ಹಳಿಯಾಳ(Haliyal) : ದಾಂಡೇಲಿ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಉತ್ತರಕನ್ನಡ ಜಿಲ್ಲೆಯ ಹಳಿಯಾಳ(Haliyal) ತಾಲೂಕಿನ ಕೆಸರೊಳ್ಳಿ ಗ್ರಾಮದ(Kesarolli Village) ಹತ್ತಿರ ಕ್ರೂಸರ್ ಮತ್ತು ಎರ್ಟಿಕಾ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ಪರಿಣಾಮವಾಗಿ ಶಿಂದೋಗಿ ಗ್ರಾಮದ(Sindogi Village) ಮಂಜುನಾಥ ಕಣವಿ (26) ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಘಟನೆಯಲ್ಲಿ ಎರಡೂ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಒಟ್ಟು 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹಳಿಯಾಳ ತಾಲೂಕು ಆಸ್ಪತ್ರೆಗೆ(Haliyal Taluku Hospital) ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಮಾಹಿತಿಯ ಪ್ರಕಾರ, ಕ್ರೂಸರ್(Cruiser) ವಾಹನವು ಬೆಳಗಾವಿ(Belagavi) ಜಿಲ್ಲೆಯ ಸವದತ್ತಿಗೆ ತೆರಳುತ್ತಿದ್ದರೆ, ಎರ್ಟಿಕಾ ಕಾರು(Ertiga Car) ದಾಂಡೇಲಿಯಿಂದ ಹಳಿಯಾಳದತ್ತ(Dandeli to Haliyal) ಪ್ರಯಾಣಿಸುತ್ತಿತ್ತು ಸ್ಥಳಕ್ಕೆ ಹಳಿಯಾಳ ಪೊಲೀಸರು ಧಾವಿಸಿ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ(Haliyal Police Station) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಗೋಕರ್ಣಕ್ಕೆ ಭೇಟಿ ನೀಡಿದ ಹೆಸರಾಂತ ನಟಿ. ಸೆಲ್ಪಿಗೆ ಮುಗಿ ಬಿದ್ದ ಅಭಿಮಾನಿಗಳು.
ಭಟ್ಕಳದಲ್ಲಿ ಮನೆ ಮೇಲೆ ದಾಳಿ. ಕಾಡುಕೋಣ ಮಾಂಸ ಪತ್ತೆ. ಆರೋಪಿ ಎಸ್ಕೇಪ್.
ಅಂಕೋಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ: ಹಲವರಿಗೆ ಗಂಭೀರ ಗಾಯ
