ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಮಂಗಳೂರು(Manglore) : ಇಂದು ಬೆಳಿಗ್ಗೆ ಇಲ್ಲಿನ ಬಿ.ಸಿ ರೋಡ್ ನಲ್ಲಿ(B C Road) ಇನ್ನೋವಾ ವಾಹನ ಅಪಘಾತಕ್ಕೀಡಾಗಿ ಮೂವರು ಸಾವನ್ನಪ್ಪಿದ ದುರ್ಘಟನೆ ನಡೆದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯ ಪಣಂಬೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ(Panburu National Highway) ಮತ್ತೊಂದು ಭೀಕರ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮತ್ತೆ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್(Panamburu Signal) ಬಳಿ ಸಂಭವಿಸಿದೆ.. ಸಿಗ್ನಲ್ ನಲ್ಲಿ ವಾಹನಗಳು ನಿಂತಿದ್ದ ಸಂದರ್ಭದಲ್ಲಿ ಟ್ಯಾಂಕರ್ ವೊಂದು ಮುಂದಿನ ಅಟೋ ರಿಕ್ಷಾಗೆ ಡಿಕ್ಕಿಯಾಗಿ ನಿಂತಿದ್ದು, ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿ ಘಟನೆ ನಡೆದಿದೆ .
ಆಟೋ ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು(Mangalore North Traffic Police) ಭೇಟಿ ನೀಡಿ ಅಪಘಾತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಇದನ್ನು ಓದಿ : ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತು ಉರಿದ ಲಾರಿ. ಸಂಚಾರ ಅಸ್ತವ್ಯಸ್ತ
ನಕಲಿ ಆದೇಶ ವೈರಲ್. ನಾಳೆ ಸಾಲು ಮರದ ತಿಮ್ಮಕ್ಕ ಅವರಿಗೆ ಸರ್ಕಾರಿ ಗೌರವ.
ರಾತ್ರಿ ಉಪನಿರ್ದೇಶಕಿ ವಾಹನ ಹಿಂಬಾಲಿಸಿದ ಮರಳು ಸಾಗಾಟದಾರರು. ಹೊನ್ನಾವರದಲ್ಲಿ ನಡೆದ ಘಟನೆ.

