ಇ ಸಮಾಚಾರ ಡಿಜಿಟಲ್ ನ್ಯೂಸ್(esamachara  digital news) ಹೊನ್ನಾವರ(Honnavar) : ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ (Honnavar)  ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿದ್ದಾನೆ.

ಹೊನ್ನಾವರದ ರಾಷ್ಟ್ರೀಯ ಹೆದ್ದಾರಿಯ(Honnavar National Highway) ಕಾಸರಕೋಡ ಬಳಿ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ. ಕಿರಣ ಬಾಲಚಂದ್ರ ನಾಯ್ಕ (25) ಮೃತ ಯುವಕ.  ಸ್ಕ್ಯೂಟಿ ಮೇಲೆ ಪರಿಚಯದವರಿಗೆ ಔಷಧಿ ನೀಡಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ತೀವ್ರತೆಗೆ ಕಿರಣ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಕಿರಣ ಅವರು ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಬಾಲಚಂದ್ರ ನಾಯ್ಕ ಮಾಳ್ಕೋಡ ಅವರ ಪುತ್ರರಾಗಿದ್ದಾರೆ. ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ(Honnavar Police Station) ಪ್ರಕರಣ ದಾಖಲಾಗಿದ್ದು, ಅಪರಿಚಿತ ವಾಹನ ಹಾಗೂ ಚಾಲಕರ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನು ಓದಿ : ಹಲ್ಲೆಗೂ ನಮಗೂ ಯಾವ ಸಂಬಂಧವೂ ಇಲ್ಲ. ನಾಯಕ ಕುಟುಂಬದ ಹೇಳಿಕೆ.

ಏಪ್ರಿಲ್, ಮೇ ತಿಂಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ.

ಏಪ್ರಿಲ್ 5ರಿಂದ 9ರವರೆಗೆ ಮುಂಡಳ್ಳಿಯಲ್ಲಿ ಅಮ್ಮನವರ ಅಷ್ಟಬಂಧ ಬ್ರಹ್ಮಕಲಶೋತ್ಸವ