ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news)ಜೋಯಿಡಾ(Joida) :  ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಬಾಮಣಗಿಯ ಹತ್ತಿರ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜಿಂಕೆ ಸಾವನ್ನಪ್ಪಿದ ಘಟನೆ ನಡೆದಿದೆ.

ಜೋಯಿಡಾದಿಂದ ದಾಂಡೇಲಿಗೆ ತೆರಳುವ ಮಾರ್ಗದಲ್ಲಿ ಯಾವುದೋ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ.  ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.