ಉಡುಪಿ(Udupi) : ಎರಡು ದಶಕಗಳ ನಂತರ ಉಡುಪಿ ಜಿಲ್ಲೆಯ ಹೆಬ್ರಿ(Udupi District Hebri) ತಾಲೂಕಿನಲ್ಲಿ ಎನ್‌ಕೌಂಟರ್(Encounter) ನಡೆದಿದೆ. ಇಲ್ಲಿನ ಕಬ್ಬಿನಾಲೆ ಅರಣ್ಯ ಪ್ರದೇಶ(Kabbinale Forest Area) ಪಿತಬೈಲು ಎಂಬಲ್ಲಿ ನಕ್ಸಲ್ ವಿಕ್ರಂ ಗೌಡ (Nakshal Vikram Gouda) ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಒಂದೂವರೆ ದಶಕದಿಂದ ನಕ್ಸಲ್ ಆಗಿದ್ದ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಎಎನ್‌ಎಫ್ ಪಡೆ ಎನ್‌ಕೌಂಟರ್ ಮಾಡಿದ್ದು ವಿಕ್ರಂ ಗೌಡ ಸಹಚರರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ.
ಎಎನ್‌ಎಫ್ ತಂಡ(ANF Team) ತಡರಾತ್ರಿ ಕೂಂಬಿಂಗ್(Cumbing) ಮಾಡುತ್ತಿದ್ದ ವೇಳೆ ವಿಕ್ರಂ ಗೌಡ ನೇತೃತ್ವದ ನಕ್ಸಲರ ತಂಡ ಮುಖಾಮುಖಿಯಾಗಿದೆ ಎನ್ನಲಾಗಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಬರಬೇಕಾಗಿದೆ.
13 ವರ್ಷಗಳ ನಂತರ ಉಡುಪಿ (Udupi) ಭಾಗದಲ್ಲಿ ಗುಂಡಿನ ಮೊರತೆ ಕೇಳಿಸಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
ನಕ್ಸಲರ ನೇತ್ರಾವತಿ(Netravati) ದಳದ ನಾಯಕ ವಿಕ್ರಂ ಗೌಡ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯ ಪ್ರದೇಶದ ಗ್ರಾಮದಲಿ ನಡೆದ ಎನ್‌ಕೌಂಟರ್‌ನಲಿ ಹತನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ(Dakshinakannada District) ಕಡಬ(Kadaba), ಸುಳ್ಯ (Sulya) ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು(Chikamanglore) ಜಿಲ್ಲೆಯ ಕೊಪ್ಪ (Koppa) ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.
ಇದಾದ ಬಳಿಕ ನಕ್ಸಲರ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿದೆ.ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ(Kasturi Rangan Report) ಜಾರಿ ವಿರೋಧಿಸಿ ನಕ್ಸಲರು ಕೊಪ್ಪ ಶೃಂಗೇರಿ(Shrungeri) ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು.
ಇದನ್ನು ಓದಿ : ಸಹಕಾರಿ ಸಂಘದ ಸಾಲ ಮರಳಿಸದ ವ್ಯಕ್ತಿಗೆ ಶಿಕ್ಷೆ
ಆಕಾಶಕ್ಕೆ ಬೃಹತ್ ಬಲೂನ್ ಹಾರಿ ಬಿಟ್ಟ ಭಕ್ತರು