ಕಾರವಾರ : ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಧೋರಣೆ ಖಂಡಿಸಿ ಕಾರವಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದರು.
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸಿರೋದನ್ನ ಖಂಡಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ತೊಲಗಬೇಕು. ತೈಲ ಬೆಲೆ ಏರಿಸಿರೋದನ್ನ ತಕ್ಷಣ ಇಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ, ನಾಗರಾಜ್ ನಾಯಕ, ಸುಭಾಸ್ ಗುನಗಿ ಮತ್ತು ಇತರರು ಮಾತನಾಡಿ ಸರ್ಕಾರದ ವೈಫಲ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ, ಗ್ರಾಮೀಣ ಪ್ರಭಾರಿ ಗಜಾನನ ಗುನಗ, ಮುಖಂಡರಾದ ನಾಗರಾಜ್ ನಾಯಕ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬ್ಳೆ, ನಾಗೇಶ್ ಕುರ್ಡೇಕರ್, ಸುಭಾಸ್ ಗುನಗಿ, ರೇಷ್ಮಾ ಮಾಲ್ಸೇಕರ್, ಮಾಲಾ ಹುಲುಸ್ವಾರ, ಗಜಾನನ ಕುಬಡೆ, ಉದಯ ನಾಯ್ಕ ಅಮದಳ್ಳಿ, ಶ್ರೀನಿವಾಸ ಹರಿಕಾಂತ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.