ಇ ಸಮಾಚಾರ ಡಿಜಿಟಲ್ ನ್ಯೂಸ್ (esamachara digital news) ತಮಿಳುನಾಡು(Tamilunadu) : ತಮಿಳುನಾಡು ಬಿಜೆಪಿಗೆ(Tamilunadu BJP) ಶಕ್ತಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ(K Anna mallai) ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್(Nitin Nabin) ಅವರನ್ನು ಭೇಟಿಯಾಗಿ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ ಆರು ವರ್ಷಗಳ ಸುದೀರ್ಘ ಸಂಬಂಧವನ್ನು ಅಂತಿಮಗೊಳಿಸಿದ್ದಾರೆ.
ಈ ಹಿಂದೆ ಅಣ್ಣಾ ಮಲೈ ಬಿಜೆಪಿ(Anna Mallai BJO) ಪಕ್ಷಕ್ಕೋಸ್ಕರ ತಲೆ ಮೇಲೆ ಚಪ್ಪಲಿ ಹೊತ್ತು, ಚಾಟಿಯಲ್ಲಿ ಬಡಿದುಕೊಂಡು ವಿನೂತನ ರೀತಿಯಲ್ಲಿ ಪ್ರತಿಭಟಿಸಿ ಗಮನ ಸೆಳೆದಿದ್ದರು.
ಎಐಎಡಿಎಂಕೆ(AIADMK) ಪಕ್ಷವನ್ನು ಮರಳಿ ಎನ್‌ಡಿಎ(NDA) ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂದು ಹೇಳಲಾಗುತಿತ್ತು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು. ಈ ಹಿಂದೆ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ(Tamilunadu MLA Election) ಉಸ್ತುವಾರಿ ಸ್ಥಾನ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದನ್ನ ಸ್ಮರಿಸಬಹುದು.
ಅಣ್ಣಾಮಲೈ ಅವರು ಬಿಜೆಪಿ ಬಿಟ್ಟು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ‘ಮಕ್ಕಳ್ ಶಕ್ತಿ ಇಯಕ್ಕಂ’ (ಜನಶಕ್ತಿ ಆಂದೋಲನ) ಎಂಬ ಹೊಸ ಜನಪರ ಚಳವಳಿಯನ್ನು ಅಥವಾ ಸಂಘಟನೆಯನ್ನು ಆರಂಭಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅವರ ಮುಂದಿನ ನಡೆ ಏನು ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನು ಓದಿ : ಐವಾನ್ ಡಿಸೋಜಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕ್ಯಾಥೋಲಿಕ್ ಸಂಘ ಆಗ್ರಹ.
