ಭಟ್ಕಳ(Bhatkal) : ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ನೀಡುವ ಅಕ್ಕಿಯನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆಸಾಮಿಯನ್ನ ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ.

ಖಚಿತ ಸುಳಿವಿನ ಮೇರೆಗೆ ದಾಳಿ ನಡೆಸಿದ ಆಹಾರ ನಿರೀಕ್ಷಕರು ಪತ್ತೆ ಮಾಡಿದ್ದು ಆರೋಪಿ ವಿರುದ್ಧ ಭಟ್ಕಳ ಶಹರ ಪೊಲೀಸ್‌ ಠಾಣೆಯಲ್ಲಿ ದೂರು  ದಾಖಲಿಸಿದ್ದಾರೆ.

ನಜೀರ ಅಹ್ಮದ್‌ ಯೂಸುಫ್ ಶೇಖ ಬಂಧಿತ ಆರೋಪಿಯಾಗಿದ್ದು, ಭಟ್ಕಳ ತಾಲೂಕಿನ ಪುರವರ್ಗದ ಗಣೇಶ ನಗರ ನಿವಾಸಿಯಾಗಿದ್ದಾನೆ. ಗುಜರಿ ವ್ಯಾಪಾರಿಯಾಗಿರುವ ಇವರು ಪಡಿತರ ಅಕ್ಕಿಯ ಮೂಟೆಗಳನ್ನು  ಓಮಿನಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದಾಗ ವಶಕ್ಕೆ ತೆಗೆದುಕೊಳ್ಳಲಾಗಿದೆ.  ಭಟ್ಕಳ ಅರ್ಬನ್ ಬ್ಯಾಂಕ್ ಎದುರುಗಡೆ ಹೂವಿನ ಚೌಕದ ಕಡೆ ಹೋಗುತ್ತಿದ್ದ ಓಮಿನಿ ವಾಹನವನ್ನು ತಡೆದು ಪರಿಶೀಲಿಸಲಾಗಿತ್ತು. ವಾಹನದಲ್ಲಿ ಸುಮಾರು 17680 ರೂ. ಮೌಲ್ಯದ 520 ಕೆ.ಜಿ. ತೂಕದ ಅಕ್ಕಿ ಇರುವ 15 ಮೂಟೆಗಳು ಪತ್ತೆಯಾಗಿವೆ.

ಈ ಕುರಿತು ಆಹಾರ ನಿರೀಕ್ಷಕ ಶಶಿಧರ ಭೀಮಣ್ಣ ಹೊನ್ನಳ್ಳಿ ಭಟ್ಕಳ ಶಹರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನಿಖೆ ಮುಂದುವರಿದಿದೆ.

ಇದನ್ನು ಓದಿ : ಕರಾವಳಿಯಲ್ಲಿ ತಿಮಿಂಗಿಲ ವಾಂತಿ ಮಾರಾಟ ಜಾಲ. ಕಾರ್ಯಾಚರಣೆಗಿಳಿದ ಅಧಿಕಾರಿಗಳೊಂದಿಗೆ ಸಂಘರ್ಷ.

ಪ್ರವೀಣ್ ನೆಟ್ಟಾರು ಹತ್ಯೆ, ವಿಮಾನ ನಿಲ್ದಾಣದಲ್ಲಿ ಮತ್ತೋರ್ವ ಆರೆಸ್ಟ್.

ಹೊನ್ನಾವರದಲ್ಲಿ ಪಲ್ಟಿಯಾದ ಕೋಲಾರ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್.